ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಮತ್ತು ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ವತಿಯಿಂದ ವಿವಿಯ ಮಂಗಳಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿವೇಕಾನಂದರ 161 ನೇ ಜನ್ಮದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ವಿದೇಶಗಳಲ್ಲಿ ಭಾರತದ ಬಗ್ಗೆ ಕೆಟ್ಟ ಅಭಿಪ್ರಾಯಗಳಿದ್ದರೂ ಸ್ವಾಮಿ ವಿವೇಕಾನಂದರು ದೇಶವನ್ನು ಬಿಟ್ಟುಕೊಡದೆ ಹೆಮ್ಮೆಯಿಂದ ಮಾತನಾಡುತ್ತಿದ್ದರು ಹಾಗೂ ದೇಶವನ್ನು ಸಮಸ್ಯೆಗಳಿಂದ ಹೊರತರಲು ಸಾಕಷ್ಟು ಶ್ರಮಿಸಿದ್ದಾರೆ ಎಂದು ವಿವರಿದರು.
ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ, ಸ್ವಾಮಿ ವಿವೇಕಾನಂದರ ಬದುಕನ್ನು ಉಲ್ಲೇಖಿಸುತ್ತಾ, ಇಂದಿನ ಯುವ ಜನತೆ ಭಾರತದ ಬಗ್ಗೆ ತಿಳಿದುಕೊಳ್ಳಬೇಕು. ನಮ್ಮ ಸಂಸ್ಕೃತಿ ಸಂಪ್ರದಾಯದ ಕುರಿತು ಅರಿವನ್ನು ಮೂಡಿಸಿಕೊಳ್ಳಬೇಕು. ಇತಿಹಾಸ ಪರಂಪರೆಯ ಕುರಿತು ಜ್ಞಾನವನ್ನು ಹೊಂದಿರಬೇಕು ಎಂದು ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿ, ಸಂವಾದ ಚಾನಲ್ ನ ಸಂಪಾದಕ ವೃಷಾಂಕ್ ಭಟ್ ಮಾತನಾಡುತ್ತಾ, ಭಾರತದ ಸಮಸ್ಯೆಗಳ ಬಗ್ಗೆ ಸ್ವಾಮಿ ವಿವೇಕಾನಂದರು ಬಹಳ ಪ್ರಬಲವಾಗಿ ಮಾತನಾಡುತ್ತಿದ್ದರು. ದೇಶ ಸುಖವಾಗಿ ಇರಬೇಕಾದರೆ ದೇಶದ ಪ್ರತಿಯೊಬ್ಬರೂ ಸುಖವಾಗಿರಬೇಕು ಎನ್ನುವುದು ವಿವೇಕಾನಂದರ ಚಿಂತನೆಯಾಗಿತ್ತು ಎಂದರು.
ವಿಶ್ವವಿದ್ಯಾನಿಲಯದ ವಸ್ತುವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಮಂಜುನಾಥ ಪಟ್ಟಾಭಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ಸ್ವಾಮಿ ವಿವೇಕಾನಂದ ಅಧ್ಯಯನ ಪೀಠದ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಡಾ. ಪರಮೇಶ್ವರ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಿವಿಯ ಹಲವು ವಿಭಾಗದ ಮುಖ್ಯಸ್ಥರು, ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ