ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ ಕೇಂದ್ರದ ವತಿಯಿಂದ ಸಾವಿತ್ರಿಬಾಯಿ ಪುಲೆಯವರ 192 ನೇ ಜನ್ಮ ದಿನದ ಪ್ರಯುಕ್ತ ಗೌರವ ನಮನ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ. ಕೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾವಿತ್ರಿಬಾಯಿ ಪುಲೆಯವರು ಸಮಾಜ ಸುಧಾರಣೆಗಾಗಿ ಮತ್ತು ಮಹಿಳಾ ಶಿಕ್ಷಣಕ್ಕಾಗಿ ಕೈಗೊಂಡ ಹೋರಾಟಗಳನ್ನು ಸ್ಮರಿಸಿ ಗೌರವ ನಮನವನ್ನು ಸಲ್ಲಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ. ಅನಿತಾ ರವಿಶಂಕರ್ ಕ್ರಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ ವಿಶೇಷ ಕರ್ತವ್ಯಾಧಿಕಾರಿ ಡಾ. ಯಶಸ್ವಿನಿ ವಂದನಾರ್ಪಣೆ ಸಲ್ಲಿಸಿದರು. ಜೀವವಿಜ್ಞಾನ, ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು, ವಿವಿಧ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳು ಬೋಧಕ- ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ