|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮೇ. 3 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಮೇ. 3 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ


ಉಜಿರೆ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2023ರ ಮೇ 3 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತೊಂದನೆ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.


ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸಿರೆ, ರವಿಕೆಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸಲಾಗುತ್ತಿದ್ದು ಈ ತನಕ ಒಟ್ಟು 12,576 ಜೊತೆ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ಸಾಮೂಹಿಕ ವಿವಾಹದಲ್ಲಿ ಮುದುವೆ ಆಗಲಿಚ್ಛಿಸುವವರು ಇದೇ ಏಪ್ರಿಲ್ 20 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ: 08256-266644, ವಾಟ್ಸಪ್: 9663464648


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


0 Comments

Post a Comment

Post a Comment (0)

Previous Post Next Post