ಮತದಾರ ದಿನಾಚರಣೆ: ಪುಂಜಾಲಕಟ್ಟೆಯಲ್ಲಿ ರಸ್ತೆ ಜಾಥಾ, ಬೀದಿ ನಾಟಕ

Upayuktha
0


ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ರಾಷ್ಟ್ರೀಯ ಸೇವಾ ಯೋಜನೆ, ಭಾರತೀಯ ಯುವ ರೆಡ್ ಕ್ರಾಸ್, ಮತದಾರರ ಸಾಕ್ಷರತಾ ಸಂಘ ಮತ್ತು ದತ್ತು ಗ್ರಾಮವಾದ ಗ್ರಾಮ ಪಂಚಾಯತ್ ಮಡಂತ್ಯಾರು, ಗ್ರಾಮ ಪಂಚಾಯತ್ ಮಾಲಾಡಿ ಹಾಗೂ ಜೆಸಿಐ ಮಡಂತ್ಯಾರು ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ರಸ್ತೆ ಜಾಥಾ ಮತ್ತು ಬೀದಿ ನಾಟಕವನ್ನು ಹಮ್ಮಿಕೊಳ್ಳಲಾಯಿತು.


ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ.ಕೆ ಶರತ್ ಕುಮಾರ್ ಇವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ತಿಳಿಸಿದರು. ಗ್ರಾಮ ಪಂಚಾಯತ್ ಮಡಂತ್ಯಾರ್ ಇದರ ಅಧ್ಯಕ್ಷರಾದ ಶ್ರೀಮತಿ ಶಶಿಪ್ರಭ ಮತ್ತು ಗ್ರಾಮ ಪಂಚಾಯತ್ ಮಾಲಾಡಿ ಇದರ ಅಧ್ಯಕ್ಷರಾದ ಶ್ರೀಮತಿ ಬೇಬಿ ಸುಸಾನ ಇವರು ಹೊಸ ಮತದಾರರಿಗೆ ಗುರುತಿನ ಚೀಟಿ ನೀಡುವ ಮುಖಾಂತರ ಮತ್ತು ಮತದಾನದ ಭಿತ್ತಿ ಪತ್ರವನ್ನು ಹಸ್ತಾಂತರಿಸುವ ಮುಖಾಂತರ ಸಾಂಕೇತಿಕವಾಗಿ ರಸ್ತೆ ಜಾಥಾಕ್ಕೆ ಚಾಲನೆಯನ್ನು ನೀಡಿದರು.


ಗ್ರಾಮ ಪಂಚಾಯತ್ ಮಡಂತ್ಯಾರ್ ಇದರ ಪಿ.ಡಿ.ಓ ಪುರುಷೋತ್ತಮ ಜಿ ಪ್ರಸ್ತಾವಿಕ ನುಡಿಗಳನ್ನು ಆಡಿದರು. ರಾಜಶೇಖರ್ ರೈ, ಪಿಡಿಓ ಗ್ರಾಮ ಪಂಚಾಯತ್ ಮಾಲಾಡಿ, ಇವರು ಮತದಾನದ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು. ಮಡಂತ್ಯಾರ್ ಬಸ್ಸು ನಿಲ್ದಾಣದ ಆವರಣದಲ್ಲಿ ಮತದಾನದ ಮಹತ್ವದ ಕುರಿತು ಸ್ವಯಂಸೇವಕರಿಂದ ಬೀದಿ ನಾಟಕ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಮಡಂತ್ಯಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಂಗೀತಾ ಎ ಶೆಟ್ಟಿ, ಜೆಸಿಐ ಮಡಂತ್ಯಾರ್ ಅಧ್ಯಕ್ಷರಾದ ಅಶೋಕ್, ಪಂಚಾಯಿತಿ ಸದಸ್ಯರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಸಂತೋಷ್ ಪ್ರಭು ಎಮ್, ಚಿತ್ರಾ ಪಡಿಯಾರ್, ಭಾರತೀಯ ಯುವ ರೆಡ್ ಕ್ರಾಸ್ ನ ಸಂಚಾಲಕರಾದ ಡಾ. ವೈಶಾಲಿ ಯು ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ವೃಂದದವರು ಹಾಗೂ ಸ್ವಯಂಸೇವಕರು ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top