ತೆಂಕನಿಡಿಯೂರು : ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಪ್ರಾಂಶುಪಾಲರು ಹಾಗೂ ನಿವೃತ್ತ ರಾಜ್ಯ ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ಇವರು ಮಾತನಾಡಿ “ಎನ್.ಎಸ್.ಎಸ್. ನಿಂದ ವಿದ್ಯಾರ್ಥಿಗಳಿಗೆ ಜ್ಞಾನ, ಕೌಶಲ್ಯ, ಮೌಲ್ಯ ಮತ್ತು ವ್ಯಕ್ತಿತ್ವ ವಿಕಸನ ಹೊಂದಲು ಸಹಕಾರಿಯಾಗಿದೆ. ಈ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಕೊಳ್ಳುವ ವಿದ್ಯಾರ್ಥಿಯು ಭವಿಷ್ಯದ ಜೀವನದಲ್ಲಿ ಯಶಸ್ವಿಯಾಗಬಲ್ಲ. ಆದುದರಿಂದ ಎಲ್ಲಾ ವಿದ್ಯಾರ್ಥಿಗಳು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ರಾಷ್ಟ್ರೀಯ ಸೇವಾ ಯೋಜನೆ ಘಟಕ-2 ರ ಯೋಜನಾಧಿಕಾರಿಗಳಾದ ಡಾ ಮಹೇಶಕುಮಾರ್ ಕೆ.ಇ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕ- 1ರ ಯೋಜನಾಧಿಕಾರಿಗಳಾದ ಶ್ರೀಮತಿ ಸುಷ್ಮಾ ಟಿ. ವಿದ್ಯಾರ್ಥಿಗಳಿಗೆ ಎನ್.ಎಸ್.ಎಸ್. ಪ್ರತಿಜ್ಞೆಯನ್ನು ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ ವಹಿಸಿದ್ದರು. ಐಕ್ಯುಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ ಉಪಸ್ಥಿತರಿದ್ದರು. ಎನ್.ಎನ್.ಎಸ್. ವಿದ್ಯಾರ್ಥಿ ನಾಯಕರುಗಳಾದ ಗೌತಮಿ ಜಿ. ಸುವರ್ಣ ಸ್ವಾಗತಿಸಿ, ಶ್ರಾವ್ಯಾ ಎ ಧನ್ಯವಾದ ಅರ್ಪಿಸಿದರು. ಶ್ರದ್ಧಾ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ