ಮಂಗಳೂರು: ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ವತಿಯಿಂದ ಸ್ನಾತಕೋತ್ತರ ರಸಾಯನಶಾಸ್ತ್ರ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ 'ನವ ಆರಂಭʼ ಅಥವಾ ಫ್ರೆಶರ್ಸ್ ಡೇ ಯನ್ನು ಗುರುವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ. ಅನಸೂಯ ರೈ ಮಾತನಾಡಿ, ಬದಲಾಗುತ್ತಿರುವ ಜಗತ್ತಿಗೆ ತಕ್ಕಂತೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು. ಈ ನಿಟ್ಟಿನಲ್ಲಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿಗಳೆಲ್ಲರೂ ಪಡೆದುಕೊಳ್ಳಬೇಕೆಂದರು, ಎಂದು ಶುಭಹಾರೈಸಿದರು.
ಮುಖ್ಯ ಅತಿಥಿ, ಸುರತ್ಕಲ್ ಎನ್ಐಟಿಕೆಯ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಸೈಕತ್ ದತ್ತಾ ಅವರು ಕ್ರ್ಯಾಕಿಂಗ್ ಗೇಟ್/ ನೆಟ್ ಗೆಟ್ಟಿಂಗ್ ಅಹೇಡ್ ಆಫ್ ಕರ್ವ್ ಮತ್ತು ಕನ್ವೆರ್ಟಿಂಗ್ ಕಾರ್ಬೋಹೈಡ್ರೇಟ್ಸ್ ಇಂಟು ಆರ್ಗ್ಯಾನಿಕ್ ಕೆಮಿಕಲ್ಸ್: ಪ್ರಾಕ್ಟಿಕಾಲಿಟಿ ಆಫ್ ದಿ ವೇಸ್ಟ್ ಟು ವೆಲ್ತ್ ಫಿಲಾಸಫಿ ಎಂಬ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. “ನಾವು ಇವತ್ತು ಗಳಿಸಿರುವ ಉದ್ಯೋಗ ಹತ್ತು ಹದಿನೈದು ವರ್ಷಗಳ ನಂತರ ಸ್ಥಿರವಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಹಾಗಾಗಿ ನಾವು ಪ್ರತಿದಿನವೂ ಅಪ್ಡೇಟ್ ಆಗುತ್ತಿರಬೇಕು,” ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗದ ಸಂಯೋಜಕ ಡಾ. ಲಕ್ಷ್ಮಣ ಕೆ, ರಸಾಯನ ಶಾಸ್ತ್ರ ಪದವಿ ವಿಭಾಗದ ಮುಖ್ಯಸ್ಥೆ ಡಾ. ಕೆ. ಎಮ್ ಉಷಾ, ವಿವಿಧ ವಿಭಾಗಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ