ನಿಧಿಲ್ಯಾಂಡ್ ಸಂಸ್ಥೆಯ ನೂತನ ಕಛೇರಿ ಉದ್ಘಾಟನೆ

Upayuktha
0

ಮಂಗಳೂರು: ನಗರದ ಪ್ರಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ನಿಧಿಲ್ಯಾಂಡ್ ಇದರ ನೂತನ ಕಚೇರಿ ಬಿಜೈ, ಕುಂಟಿಕಾನ ಬಳಿ ಇರುವ, ನ್ಯೂ ಬೆರ್ರಿ ಎನ್‌ಕ್ಲೇವ್ ನ 5ಮಹಡಿಯಲ್ಲಿ ಉದ್ಘಾಟನೆಗೊಂಡಿತು.


ದೀಪ ಪ್ರಜ್ವಲನ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ವೈ.ಭರತ್ ಶೆಟ್ಟಿ ಮಾತನಾಡಿ ನಗರ ಪ್ರದೇಶಗಳಲ್ಲಿ ಗೃಹ ನಿರ್ಮಾಣ, ಬಹುಮಹಡಿ ಕಟ್ಟಡ ನಿರ್ಮಾಣ ಮಾಡಲು ಕೆಲವೊಂದು ಸಮಸ್ಯೆಗಳಿವೆ. ಇಂತಹ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಈಗಾಗಲೇ ಸಿಂಗಲ್ ವಿಂಡೋ ಸಿಸ್ಟಮ್ ಅನ್ನು ಜಾರಿಗೆ ತಂದು ಅವುಗಳ ಮೂಲಕ ಸಮಸ್ಯೆ ಪರಿಹರಿಸುವ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಮುಂದಕ್ಕೆ ಇನ್ನಷ್ಟು ಉತ್ತಮ ರೀತಿಯಲ್ಲಿ ಸಹಾಯ ಮಾಡಲಿದೆ ಎಂದರು.


ನಿಧಿ ಲ್ಯಾಂಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್. ಕೆ. ಸನಿಲ್ ರವರು ಅತಿಥಿಗಳನ್ನು ಸ್ವಾಗತಿಸುತ್ತಾ, ತಮ್ಮ ಸಂಸ್ಥೆ ಬೆಳೆದು ಬಂದ ಬಗ್ಗೆ ವಿವರಿಸುತ್ತಾ ಕಳೆದ 10 ವರ್ಷಗಳಿಂದ ಸುಮಾರು 10 ಬಹು ಮಹಡಿಗಳ ಕಟ್ಟಡಗಳ ನಿರ್ಮಾಣ ಮಾಡಿದೆ ಇದರಲ್ಲಿ ನನ್ನ ಪಾತ್ರ ಕಡಿಮೆ ಇದ್ದು ನನ್ನ ಸಹೋದ್ಯೋಗಿಗಳ ಪಾತ್ರವೇ ಅಧಿಕ ಎಂದರು. ಅವರ ಪರಿಶ್ರಮದಿಂದ ಸಂಸ್ಥೆ ಈ ಹಂತಕ್ಕೆ ಬೆಳೆದಿದೆ ಎಂದರು.


ಸಮಾರಂಭದಲ್ಲಿ ಅತಿಥಿಗಳಾಗಿ ಮಂಗಳೂರು ಬ್ರಹ್ಮಕುಮಾರಿ ಸಂಸ್ಥೆಯ ಮುಖ್ಯಸ್ಥರಾದ ರಾಜಯೋಗಿನಿ ಬಿ.ಕೆ. ವಿಶ್ವೇಶ್ವರಿ ಜಿ ಯವರು ದಿವ್ಯ ಸಾನಿಧ್ಯವನ್ನು ವಹಿಸಿದ್ದು, ಮಾಜಿ ಶಾಸಕರಾದ ಜೆ. ಆರ್.ಲೋಬೋ, ಪ್ರೇಮಾನಂದ ಶೆಟ್ಟಿ, ಮಾಜಿ ಮಹಾ ಪೌರರು, ರವಿಶಂಕರ್ ಮಿಜಾರ್, ಅದ್ಯಕ್ಷರು, ಮೂಡ, ಕಾರ್ಪೊರೇಟರ್ ಲ್ಯಾನ್ಸ್ ಲಾಟ್ ಪಿಂಟೊ, ಸಿ.ಎ. ಶಾಂತಾರಾಮ ಶೆಟ್ಟಿ, ಪ್ರಕಾಶ್‌, ಸಿಇಒ ಹೊಸದಿಗಂತ, ಕ್ರೆಡೈ ಅಧ್ಯಕ್ಷ ಪುಷ್ಪರಾಜ ಜೈನ್, ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸೌಜನ್ಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top