ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ: ಶಿಕ್ಷಕ ರಕ್ಷಕ ಸಂಘದ ಮಹಾಸಭೆ

Upayuktha
0

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಶಿಕ್ಷಕ ರಕ್ಷಕದ ಮಹಾಸಭೆಯನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸೌಮ್ಯ ಜಿ ಸಬ್ ಇನ್ಸ್ಪೆಕ್ಟರ್ ಆಫ್ ಪೊಲೀಸ್ ವೇಣೂರು ಸ್ಟೇಷನ್ ಇವರು ಆಗಮಿಸಿದ್ದು ವಿದ್ಯಾರ್ಥಿಗಳ ಒಳಿತು ಹಾಗೂ ಕೆಡಕಿನ ಬಗ್ಗೆ ವಿವರಿಸುತ್ತಾ ಅವರ ವಿದ್ಯಾರ್ಥಿ ಜೀವನದ ನೀತಿ ನಿಯಮಗಳ ಬಗ್ಗೆ ಪೋಷಕರಿಗೆ ಅರಿವನ್ನು ಮೂಡಿಸಿದರು.


ಅಧ್ಯಕ್ಷತೆಯನ್ನು ವಹಿಸಿದಂತಹ ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ ಕೆ ಶರತ್ ಕುಮಾರ್ ಇವರು ವಿದ್ಯಾರ್ಥಿಗಳ ಶೈಕ್ಷಣಿಕದ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಪೋಷಕರು, ಕಾಲೇಜಿನ ಬೋಧಕ ಬೋಧಕೇತರ ವೃಂದದವರು, ಎನ್ಎಸ್ಎಸ್ ಸ್ವಯಂಸೇವಕರು, ರೋವರ್ ರೇಂಜರ್ ವಿದ್ಯಾರ್ಥಿಗಳು ಆಗಮಿಸಿದ್ದರು. ಪ್ರೊ. ಸಂತೋಷ್ ಪ್ರಭು ಅವರು ಸ್ವಾಗತಿಸಿ, ಪ್ರೊ. ವೈಶಾಲಿ ನಿರೂಪಿಸಿ, ಪ್ರೊ. ಕುಮಾರ್ ಅವರು ವಂದನಾರ್ಪಣೆಯನ್ನು ಮಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top