ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಗೆ ಶೇ.100 ಫಲಿತಾಂಶ

Chandrashekhara Kulamarva
0





ಪಾಣಾಜೆ : ಕರ್ನಾಟಕ ಶಿಕ್ಷಣ ಮಂಡಳಿ ನಡೆಸಿದ 2022-23 ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ ಲಭಿಸಿರುತ್ತದೆ.


ಹೈಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ ಎಂಟು ವಿದ್ಯಾರ್ಥಿಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.


ಲೋಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ 7 ಮಂದಿ ವಿದ್ಯಾರ್ಥಿಗಳಲ್ಲಿ ಐದು ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿ  ಎರಡು ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಶೇಕಡ 100 ಫಲಿತಾಂಶ ಲಭಿಸಿರುತ್ತದೆ   ಎಂದು ಶಾಲಾ ಸಂಚಾಲಕ ಗಿಳಿಯಾಲು ಮಹಾಬಲೇಶ್ವರ ಭಟ್  ತಿಳಿಸಿರುತ್ತಾರೆ.


ವಿದ್ಯಾರ್ಥಿಗಳಿಗೆ ಶಾಲಾ ಚಿತ್ರಕಲಾ ಶಿಕ್ಷಕಿ ಶ್ರೀಮತಿ ಶಾರದಾ ಜಿ, ಮಾರ್ಗದರ್ಶನ ನೀಡಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top