ಮಂಗಳೂರು: ವೃತ್ತಿಯಲ್ಲಿ ವಕೀಲೆ ಪ್ರವೃತ್ತಿಯಲ್ಲಿ ಕವಯತ್ರಿ ಮಕ್ಕಳ ಸಾಹಿತಿಯಾಗಿರುವ ಮಂಗಳೂರು ಮೂಲದ ಪರಿಮಳ ಮಹೇಶ್ ರಾವ್ ಇವರು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದಲ್ಲಿ ಜನವರಿ 9 ಮತ್ತು 10ರಂದು ನಡೆದ ಬೃಹತ್ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಎನ್. ಅಶೋಕ ನಿರ್ದೇಶನದಂತೆ, ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಅರುಣ್ ಅಧಿಕಾರ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತೆ ಕುಸುಮ ಬಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ