ವಿವಿ ಕಾಲೇಜು: ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪ್ರಜನ್‌ ವಿ ಶೆಟ್ಟಿ ಆಯ್ಕೆ

Upayuktha
0

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಗಾಗಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಂತಿಮ ಬಿ.ಕಾಂ ವಿದ್ಯಾರ್ಥಿ ಪ್ರಜನ್‌ ವಿ ಶೆಟ್ಟಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.


ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿ ಅಂತಿಮ ಬಿ. ಎಸ್ಸಿಯ ತಶ್ವಿತ್‌ ಎಂ ಬಿ, ಜೊತೆ ಕಾರ್ಯದರ್ಶಿಯಾಗಿ ಅಂತಿಮ ಬಿ. ಎಸ್ಸಿಯ ಯಶಸ್ವಿ ಕೆ, ಲಲಿತ ಕಲಾ ಸಂಘದ ಕಾರ್ಯದರ್ಶಿಯಾಗಿ ಅಂತಿಮ ಬಿಎ ಯ ಪ್ರತೀಕ್ಷಾ ಪಿ ಹಾಗೂ ಜೊತೆ ಕಾರ್ಯದರ್ಶಿಯಾಗಿ ಅಂತಿಮ ಬಿ.ಕಾಂ ನ ಶರಣ್ಯ ಪಿ ಆಯ್ಕೆಯಾದರು. ಈ ಬಾರಿ ಕಲಾ ಪದವಿ ಮತ್ತು ವಿಜ್ಞಾನ ಪದವಿ ಗಳಿಂದ ತರಗತಿ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರಿಂದ, ಏಳು ತರಗತಿ ಪ್ರತಿನಿಧಿಗಳ ಸ್ಥಾನಗಳು ಹಾಗೂ ಓರ್ವ ಮಹಿಳಾ ಪ್ರತಿನಿಧಿ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಜಯಶಾಲಿಗಳ ಅದ್ಧೂರಿ ಸಂಭ್ರಮಾಚರಣೆ ಗಮನ ಸೆಳೆಯಿತು.


ಪ್ರಾಂಶುಪಾಲೆ ಡಾ. ಅನಸೂಯ ರೈ ಅವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ, ಚುನಾವಣಾ ಸಮಿತಿಯ ನೇತೃತ್ವವನ್ನು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಜಯವಂತ ನಾಯಕ್‌ ವಹಿಸಿದ್ದರು. ವಿದ್ಯಾರ್ಥಿ ಸಂಘದ ಉಪನಿರ್ದೇಶಕ ಡಾ. ಎ ಹರೀಶ, ವಿದ್ಯಾರ್ಥಿ ಕ್ಷೇಮಪಾಲಕ ಡಾ. ಕುಮಾರ ಸುಬ್ರಹ್ಮಣ್ಯ ಭಟ್‌, ವಿವಿಧ ಸಮಿತಿಗಳ ಸಂಚಾಲಕರು, ಸದಸ್ಯರು, ಬೋಧಕ- ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶಿಸ್ತುಬದ್ಧ ಚುನಾವಣೆಗೆ ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top