ಮಂಗಳೂರು : ಸಮಾಜ ನಮಗೆ ಎಲ್ಲವನ್ನೂ ನೀಡಿದೆ, ನಾವು ಸಮಾಜಕ್ಕೆ ಮರುಪಾವತಿ ಮಾಡಬೇಕು ಎಂದು ಕರ್ನಾಟಕ ಸರ್ಕಾರದ ಶಿಕ್ಷಣ ಸುಧಾರಣೆಗಳ (ಕ್ಯಾಬಿನೆಟ್ ಶ್ರೇಣಿ) ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ಹೇಳಿದರು.
ಶ್ರೀನಿವಾಸ ವಿಶ್ವವಿದ್ಯಾಲಯವು ದತ್ತು ಪಡೆದ ಸರ್ಕಾರಿ ಶಾಲೆಗಳ ಪ್ರಗತಿಯ ಕುರಿತು 27 ಜನವರಿ 2023 ರಂದು ಹೋಟೆಲ್ ಶ್ರೀನಿವಾಸ್ ನಲ್ಲಿ ಪ್ರಸ್ತುತಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರೊ.ಎಂ.ಆರ್.ದೊರೆಸ್ವಾಮಿ ಶಾಲೆ ದತ್ತು ಸ್ವೀಕಾರ ಮತ್ತು ಅಭಿವೃದ್ಧಿ ಕುರಿತು ಮಾತನಾಡಿದರು.
ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳು ಮತ್ತು ಎ. ಶಾಮ ರಾವ್ ಫೌಂಡೇಶನ್ ಅಧ್ಯಕ್ಷರಾದ ಡಾ.ಸಿಎ ಎ.ರಾಘವೇಂದ್ರ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶ್ರೀನಿವಾಸ ವಿಶ್ವವಿದ್ಯಾಲಯದ ಅಸೋಸಿಯೇಟ್ ಫೊಪೆಸರ್ ಡಾ.ಪ್ರದೀಪ್ ಎಂ.ಡಿ. ಪ್ರಸ್ತುತಿ ನೀಡಿದರು. ಶ್ರೀನಿವಾಸ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಪಿ.ಎಸ್. ಐತಾಳ್ ಅವರು ಯೋಜನೆಯ ಪರಿಚಯ ನೀಡಿದರು.
ಕನ್ನಡ ಡಿ.ಡಿ.ಪಿ.ಐ. ಕೆ.ಸುಧಾಕರ್ ಉಪಸ್ಥಿತರಿದ್ದರು.ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲ್ ಕುಮಾರ್ ಸ್ವಾಗತಿಸಿ, ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಡೀನ್ ಪ್ರೊ. ಸ್ವಾಮಿನಾಥನ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ