ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ರಾಜ್ಯಮಟ್ಟದ 10 ಕಿಲೋಮೀಟರ್ ಕ್ರಾಸ್‍ಕಂಟ್ರಿ ಚಾಂಪಿಯನ್‍ಶಿಪ್‍ನಲ್ಲಿ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.
ಬೆಂಗಳೂರಿನ ಆನೆಕಲ್‍ನಲ್ಲಿರುವ ಶ್ರೀ ಸಾಯಿರಾಂ ಕಾಲೇಜ್ ಆಫ್ ಎಂಜಿನಿಯರಿಂಗ್‍ನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಮಹಿಳೆಯರ ತಂಡವು ಪ್ರಥಮ ಸ್ಥಾನವನ್ನು ಮತ್ತು ಪುರುಷರ ತಂಡವು ತೃತೀಯ ಸ್ಥಾನವನ್ನು ಗೆದ್ದುಕೊಂಡು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಹುಡುಗಿಯರ ವಿಭಾಗದಲ್ಲಿ ದ್ವಿತೀಯ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ. ಐ ಬೆಳ್ಳಿ ಪದಕವನ್ನು, ದ್ವಿತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿನಿ ವಿದ್ಯಾ. ಸಿ. ಎಸ್ ಕಂಚಿನ ಪದಕವನ್ನು, ಪ್ರಥಮ ವರ್ಷದ ಕಂಪ್ಯೂಟರ್ ವಿಭಾಗದ ವಿದ್ಯಾರ್ಥಿನಿ ಜೀಕ್ಷಿತ. ಕೆ 6 ನೇ ಸ್ಥಾನ, ದ್ವಿತೀಯ ವರ್ಷದ ಕಂಪ್ಯೂಟರ್ ವಿಭಾಗದ ವಿದ್ಯಾರ್ಥಿನಿ ಮಂಜುಶ್ರೀ. ಎ 7 ನೇ ಸ್ಥಾನ, ಪ್ರಥಮ ವರ್ಷದ ಡೇಟಾ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಅಶ್ವಿನಿ 9 ನೇ ಸ್ಥಾನ ಮತ್ತು ದ್ವಿತೀಯ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಜಯಶ್ರೀ. ಬಿ 12 ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಹುಡುಗರ ವಿಭಾಗದಲ್ಲಿ ದ್ವಿತೀಯ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ವಿಭಾಗದ ವಿದ್ಯಾರ್ಥಿ ಅನ್ವಿತ್. ಬಿ. ಎನ್ 6 ನೇ ಸ್ಥಾನ, ತೃತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಶರತ್. ಕೆ. ಎಸ್ 18 ನೇ ಸ್ಥಾನ, ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿ ವೈಭವ್ ನಾಣಯ್ಯ. ಬಿ. ಡಿ 21 ನೇ ಸ್ಥಾನ, ಪ್ರಥಮ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸಂಭ್ರಮ್. ಜಿ 23 ನೇ ಸ್ಥಾನ, ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿ ಸೋಮಣ್ಣ. ಎಂ. ಡಿ 28 ನೇ ಸ್ಥಾನ ಮತ್ತು ದ್ವಿತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಅಜಿತ್ ಕುಮಾರ್. ಎಂ 35 ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ವಿಜೇತ ವಿದ್ಯಾರ್ಥಿಗಳ ಪೈಕಿ ರಕ್ಷಿತಾ. ಐ, ವಿದ್ಯಾ. ಸಿ. ಎಸ್, ಜೀಕ್ಷಿತ. ಕೆ ಹಾಗೂ ಅನ್ವಿತ್. ಬಿ.ಎನ್ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಫೆಬ್ರವರಿ 12 ರಂದು ನಡೆಯುವ ಅಖಿಲ ಭಾರತ ಅಂತರ್‍ವಿಶ್ವವಿದ್ಯಾನಿಲಯ 10 ಕಿಲೋಮೀಟರ್ ಕ್ರಾಸ್‍ಕಂಟ್ರಿ ಚಾಂಪಿಯನ್‍ಶಿಪ್‍ನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುವುದಕ್ಕೆ ಅರ್ಹತೆಯನ್ನು ಗಳಿಸಿಕೊಂಡಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮತ್ತು ಭಾರತೀಯ ಸೇನಾಪಡೆಗಳ ವಿಶ್ರಾಂತ ತರಬೇತುದಾರ ರವಿಶಂಕರ್ ಮುಕುಂದ ತರಬೇತಿ ಹಾಗೂ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ. ಕೆ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ