ಅಮರ್ ಜವಾನ್ ಜ್ಯೋತಿಗೆ ಸಹಾಯಕ ಆಯುಕ್ತರಿಂದ ಗೌರವಾರ್ಪಣೆ

Upayuktha
0

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ನಗರದ ಕಿಲ್ಲೆ ಮೈದಾನದ ಬಳಿ ನಿರ್ಮಿಸಲಾಗಿರುವ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಗೌರವ ಸಲ್ಲಿಸಲಾಯಿತು. ನಗರದ ಸಹಾಯಕ ಆಯುಕ್ತ ಗಿರೀಶ್ ನಂದನ್ ರೀತ್ ಸಮರ್ಪಿಸಿ ದೇಶಕ್ಕಾಗಿ ಬಲಿದಾನಗೈದ ಯೋಧರಿಗೆ ನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಅಧಿಖಾರಿ ವರ್ಗ, ಸಹಾಯಕ ಆಯುಕ್ತರ ಕಚೇರಿಯ ಸಿಬ್ಬಂದಿಗಳು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಸುರೇಶ್ ಶೆಟ್ಟಿ, ಉಪಪ್ರಾಂಶುಪಾಲೆ ಸುಜನಿ ಬೋರ್ಕರ್, ಅಂಬಿಕಾ ಮಹಾವಿದ್ಯಾಲಯದ ಪ್ರಾಂಶುಪಾಲ ರಾಕೇಶ ಕುಮಾರ್ ಕಮ್ಮಜೆ, ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲೆ ಸುಚಿತ್ರ ಪ್ರಭು, ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ, ಅಂಬಿಕಾ ಸಂಸ್ಥೆಯ ಉದ್ಯೋಗಿ ರವಿಚಂದ್ರ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top