ಮಂಗಳೂರು: ಜಿಲ್ಲೆಯ ಕೃಷಿ ಇಲಾಖೆ ಹಾಗೂ ಕಲ್ಲಡ್ಕದ ಶ್ರೀ ರಾಮ ವಿದ್ಯಾ ಕೇಂದ್ರ ಟ್ರಸ್ಟ್-ಸಾಮಾಜಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ 2022-2023ನೇ ಸಾಲಿನ ಸಾವಯುವ ಸಿರಿ ಯೋಜನೆಯಡಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಫೆ.10 ರಿಂದ 12 ರವರೆಗೆ ಯಂತ್ರಮೇಳದೊಂದಿಗೆ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ.
ಫೆ.10 ರಂದು ವಿಚಾರ ಸಂಕಿರಣ ನಡೆಯಲಿದೆ. ರೈತರು, ಸಾವಯುವ ಉತ್ಪನ್ನಗಳ ಉತ್ಪಾದಕರು, ಮಾರುಕಟ್ಟೆದಾರರು, ಸಾವಯುವ ಉತ್ಪನ್ನಗಳ ಮಳಿಗೆಗಳನ್ನು ಹಾಕಲು ಇಚ್ಛಿಸುವವರು ತಮ್ಮ ಮಾಹಿತಿಯನ್ನು ಮತ್ತು ಉತ್ಪನ್ನಗಳ ವಿವರಗಳನ್ನು ಮಂಗಳೂರಿನ ಉಪ ಕೃಷಿ ನಿರ್ದೇಶಕರು-1 ಅವರ ಕಚೇರಿಯನ್ನು ಸಂಪರ್ಕಿಸಿ ಫೆ .8 ರೊಳಗೆ ನೋಂದಾಯಿಸಬೇಕು ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿಗೆ: ದೂರವಾಣಿ ಸಂಖ್ಯೆ: 0824-2442311, 9110423481
ಕಸಪಾ ಅಧ್ಯಕ್ಷ ಡಾ. ಮಹೇಶ ಜೋಶಿ ಜಿಲ್ಲಾ ಪ್ರವಾಸ
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿಯವರು ಫೆ.2 ಹಾಗೂ 3ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ.2ರ ಗುರುವಾರ ರಾತ್ರಿ 8.25ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡುವರು. ಫೆ.3ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳ ಕುರಿತಂತೆ ಚರ್ಚಿಸಲು ಮಂಗಳೂರು ಜಿಲ್ಲೆಯ ಹಿರಿಯ ಸಾಹಿತಿಗಳು, ಕನ್ನಡ ಪರ ಹೋರಾಟಗಾರರು ಹಾಗೂ ಕಲಾವಿದರನ್ನು ಭೇಟಿಯಾಗುವರು. ಸಂಜೆ 5ಗಂಟೆಗೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ 25 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸುವರು. ರಾತ್ರಿ 9ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ತೆರಳಿ 11.15ಕ್ಕೆ ಬೆಂಗಳೂರು ಕೇಂದ್ರಸ್ಥಾನ ತಲುಪುವರು ಎಂದು ಅಧ್ಯಕ್ಷರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ