ದಕ್ಷಿಣ ವಿಭಾಗ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ: ಹಾಕತ್ತೂರು ಸರಕಾರಿ ಶಾಲೆಯ ಗ್ರಾಮೀಣ ವಿದ್ಯಾರ್ಥಿನಿ ಮೇಘಾ ಎಸ್‌ ಆಯ್ಕೆ

Chandrashekhara Kulamarva
0

ಮಡಿಕೇರಿ: ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಎಂಟನೇ ಸ್ಥಾನ ಪಡೆದ ಮಡಿಕೇರಿಯ ಹಾಕತ್ತೂರಿನ ವಿದ್ಯಾರ್ಥಿನಿ ಮೇಘಾ ಎಸ್‌, ಇದೀಗ ಕೇರಳದ ತ್ರಿಶೂರಿನಲ್ಲಿ ನಡೆಯಲಿರುವ ದಕ್ಷಿಣ ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾಳೆ.

ತನ್ನ ಗುರುಗಳ ಸಹಕಾರದೊಂದಿಗೆ ಭತ್ತದ ತೆನೆಯಿಂದ ಭತ್ತವನ್ನು ಬೇರ್ಪಡಿಸುವ ಯಂತ್ರವನ್ನು  ತಯಾರಿಸಿ ರಾಜ್ಯದುದ್ದಗಲಕ್ಕೂ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಮೇಕೇರಿ ಗ್ರಾಮದ ಹಾಕತ್ತೂರಿನ  ವಿದ್ಯಾರ್ಥಿನಿ ಮೇಘಾ ಎಸ್‌ ಬಹುಮಾನ ಪಡೆದಿದ್ದಳು.

ಪ್ರಸ್ತುತ ಹಾಕತ್ತೂರಿನ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಮೇಘಾ ಎಸ್,. ಮಡಿಕೇರಿ ಸಮೀಪದ ಮೇಕೇರಿ ಗ್ರಾಮದ ನಿವಾಸಿ ಕಾರ್ಮಿಕ ಶ್ರಮಜೀವಿ ಪಿ. ಶಿವಕುಮಾರ್ ರವರ ಪುತ್ರಿ .

ಇತ್ತೀಚೆಗೆ ಮಡಿಕೇರಿಯಲ್ಲಿ ನಡೆದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ; ಕುಶಾಲನಗರದಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮೊನ್ನೆ ಮೊನ್ನೆ ಧಾರವಾಡದಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಎಂಟನೇ ಸ್ಥಾನವನ್ನು ಪಡೆದಿದ್ದಾಳೆ. ಇದೀಗ ಕೇರಳದ ತ್ರಿಶೂರ್‌ನಲ್ಲಿ ನಡೆಯಲಿರುವ ದಕ್ಷಿಣ ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

ತಮ್ಮ ಗ್ರಾಮದ ವಿದ್ಯಾರ್ಥಿನಿ ಮೇಘಾಳ ಈ ಸಾಧನೆಗೆ ಮೇಕೇರಿ ಗ್ರಾಮದ ಸ್ವಾಗತ ಯುವಕ ಸಂಘದ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದು ಯುವಕ ಸಂಘದ ಪದಾಧಿಕಾರಿಗಳು ಈ ದಿನ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಅಭಿನಂಧನೆ ಸಲ್ಲಿಸುವುದರ ಜೊತೆಗೆ ಮುಂದಿನ ವಿಭಾಗ ಮಟ್ಟದ ಸ್ಫರ್ಧೆಗೆ ತೆರಳಲು ಸಂಘದ ವತಿಯಿಂದ ಆರ್ಥಿಕ ಸಹಾಯ ನೀಡಿದರು.

ಆ ಮೂಲಕ ಕಲಿಯುತ್ತಿರುವ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಮೇಘಾಳ ಉತ್ತಮ ಸಾಧನೆಯನ್ನು ಗೌರವಿಸಿ ಆಕೆಯ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಲಾಯಿತು. ಈ ಸಂದರ್ಭ ಸ್ವಾಗತ ಯುವಕ ಸಂಘದ ಅಧ್ಯಕ್ಷರಾದ ವಿಜು ಹರೀಶ್  ಸದಸ್ಯರಾದ ಭವನ್ ಸಾಮಾಜಿಕ ಕಾರ್ಯಕರ್ತರಾದ ಸತ್ಯ ಕರ್ಕೇರ ರವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top