ಜ.21ಕ್ಕೆ ಶೇಣಿ ಶ್ರೀಶಾರದಾಂಬ ಯುಪಿ ಶಾಲಾ ವಾರ್ಷಿಕೋತ್ಸವ

Upayuktha
0

ಪೆರ್ಲ: ಶೇಣಿ ಶ್ರೀಶಾರದಾಂಬ ಎಯುಪಿ ಶಾಲಾ ವಾರ್ಷಿಕೋತ್ಸವ ಜ.21ಕ್ಕೆ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಇದರ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು ಬೆಳಿಗ್ಗೆ  11 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕ ಎಕೆಎಂ ಆಶ್ರಫ್ ಉದ್ಘಾಟಿಸುವರು.ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಅಧ್ಯಕ್ಷತೆ ವಹಿಸುವರು. 


ಪುತ್ತಿಗೆ ಗ್ರಾ.ಪಂ.ಅಧ್ಯಕ್ಷ ಸುಬ್ಬಣ್ಣ ಆಳ್ವ, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶಶಿಧರ ಎಂ,ಯುಎಇ ಎಕ್ಸ್ ಚೆಂಚ್ ಮಾಜಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಬದಿಯಡ್ಕ ಪೋಲಿಸ್ ಠಾಣಾಧಿಕಾರಿ ವಿನೋದ್ ಕುಮಾರ್ ಕೆ.ಪಿ, ಬ್ಲೋಕ್ ಪಂ.ಸದಸ್ಯ ಅನಿಲ್ ಕುಮಾರ್ ಕೆ.ಪಿ, ಪುತ್ತಿಗೆ ಗ್ರಾ.ಪಂ.ಸದಸ್ಯ ಆಸೀಫ್ ಅಲಿ,ಹೈಯರ್ ಸೆಕೆಂಡರಿ ಪ್ರಾಂಶುಪಾಲೆ ವಿಜಯಲಕ್ಷ್ಮಿ, ಹೈಸ್ಕೂಲ್ ಮುಖ್ಯೋಪಾಧ್ಯಾಯ ಶ್ರೀಶ ಕುಮಾರ್, ಶಾಲಾ ಪ್ರಬಂಧಕಿ ಶಾರದ ವೈ,‌ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಕೋಡಿ, ಮಾತೃ ಸಂಘದ ಅಧ್ಯಕ್ಷೆ ಶಶಿಪ್ರಭಾ, ನಿವೃತ್ತ ಮುಖ್ಯೋಪಾಧ್ಯಾಯ ರವೀಂದ್ರನಾಥ ನಾಯಕ್,ಯುಪಿ ಶಾಲಾ ಮುಖ್ಯೋಪಾಧ್ಯಾಯ ರಾದಾಕೃಷ್ಣ ನಾಯಕ್ ಶೇಣಿ,  ಸ್ಟಾಫ್ ಕಾರ್ಯದರ್ಶಿ ಸುರೇಖ ಕೆ.ಎನ್. ಮೊದಲಾದವರು ಭಾಗವಹಿಸುವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
To Top