ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜನವರಿ ತಿಂಗಳಿನಲ್ಲಿ ರಾಜ್ಯದೆಲ್ಲೆಡೆ ಶುದ್ಧಜಲ ಅಭಿಯಾನ ಕಾರ್ಯಕ್ರಮ ಆಯೋಜಿಸಿದ್ದು, ಒಂದು ಲಕ್ಷ ಜನರಿಗೆ ಶುದ್ಧ ಜಲ ಬಳಕೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಶೇ. ೬೦ ರಷ್ಟು ಪ್ರದೇಶಗಳಲ್ಲಿ ಕುಡಿಯುವ ನೀರಿನಲ್ಲಿ ಅಗತ್ಯ ಪ್ರಮಾಣಕ್ಕಿಂತ ಹೆಚ್ಚು ಪ್ಲೋರೈಡ್, ಶೇ. ೨೦ ರಷ್ಟು ಅಧಿಕ ನೈಟ್ರೇಟ್ ಹಾಗೂ ಶೇ. ೩೦ ರಷ್ಟು ಸೂಕ್ಷಾ್ಮಣುಗಳಿಂದ ನೀರು ಕಲುಷಿತವಾಗಿ ಜನರು ರೋಗಗಳಿಗೆ ಬಲಿಯಾಗುತ್ತಾರೆ. ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಹಾಸನ , ಗದಗ, ಕೋಲಾರ ಮೊದಲಾದ ಕಡೆಗಳಲ್ಲಿ ಪ್ಲೋರೈಡ್ ಸಮಸ್ಯೆ ಅಧಿಕವಾಗಿ ಕಂಡು ಬಂದಿದೆ.
ರಾಜ್ಯದಲ್ಲಿ ಪ್ರಥಮವಾಗಿ ೨೦೦೯ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಯಗಟಿಯಲ್ಲಿ ಮೊದಲ ಶುದ್ಧ ಕುಡಿಯುವನೀರಿನ ಘಟಕವನ್ನು ಧರ್ಮಸ್ಥಳದ ವತಿಯಿಂದ ಪ್ರಾರಂಭಿಸಲಾಗಿದೆ.
“ಶುದ್ಧಾಗಂಗಾ” ಹೆಸರಿನಲ್ಲಿ ರಾಜ್ಯದಲ್ಲಿ ೩೭೧ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಿದ್ದು, ಪ್ರತಿ ದಿನ ೩,೩೬,೦೦೦ ಮಂದಿ ಶುದ್ಧ ನೀರನ್ನು ಬಳಸುತ್ತಿದ್ದಾರೆ. ಇದಕ್ಕಾಗಿ ಪ್ರತಿ ದಿನ ೧೭ ಲಕ್ಷ ಲೀಟರ್ ಶುದ್ಧ ಕುಡಿಯುವ ನೀರನ್ನು ಈ ಘಟಕಗಳ ಮೂಲಕ ನೀಡಲಾಗುತ್ತದೆ.
ಶುದ್ಧ ಜಲಜಾಗೃತಿ ಅಭಿಯಾನದಲ್ಲಿ ಶಾಲಾ ಮಕ್ಕಳಿಗೆ ಮಾಹಿತಿ, ಜಾಥಾ ಕಾರ್ಯಕ್ರಮ, ಕರಪತ್ರ ಹಂಚಿಕೆ, ಬೀದಿನಾಟಕ, ಸಾರ್ವಜನಿಕರಿಗೆ ಮಾಹಿತಿ ನೀಡುವುದು, ಮನೆಗಳಿಗೆ ಭೇಟಿ ನೀಡಿ ಮಾರ್ಗದರ್ಶನ ಮೊದಲಾದ ೪೦೦ಕ್ಕೂ ಮಿಕ್ಕಿ ವಿವಿಧ ಕಾರ್ಯಕ್ರಮಗಳ ಮೂಲಕ ಶುದ್ಧಜಲ ಬಳಕೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುವುದು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ