ಉಡುಪಿ : ಕರಾವಳಿ ಜಿಲ್ಲೆಗಳನ್ನು ಹಾದು ಹೋಗುವ ಕೊಂಕಣ ರೈಲ್ವೆ ವ್ಯಾಪ್ತಿಯ ರೈಲುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ರೈಲ್ವೆ ಇಲಾಖೆ ಈ ಬಗ್ಗೆ ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಇಂದು ನಗರದ ಜಿಲ್ಲಾ ಪಂಚಾಯತ್‍ನ ಡಾ. ವಿ.ಎಸ್‍ಆಚಾರ್ಯ ಸಭಾಂಗಣದಲ್ಲಿ ನಡೆದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೊಂಕಣ ರೈಲ್ವೆ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ರೈಲುಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ಹೆಚ್ಚಿನ ದೂರುಗಳು ದಾಖಲಾಗುತ್ತಿದ್ದು, ಸಾರ್ವಜನಿಕರು ಈ ಕುರಿತು ತೀವ್ರವಾಗಿ ಆರೋಪಗಳನ್ನು ಮಾಡುತ್ತಿದ್ದು, ರೈಲ್ವೆಇಲಾಖೆಯ ಅಧಿಕಾರಿಗಳು ಕಳ್ಳತನ ತಡೆಯಲು ಅತ್ಯಂತ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು. ರೈಲ್ವೆ ಬೋಗಿಗಳಲ್ಲಿ ಸಿಸಿಟಿವಿ ಅಳವಡಿಕೆ, ಪ್ರಯಾಣಿಕರಿಗೆ ಲಾಕರ್ ಗಳ ವ್ಯವಸ್ಥೆ ಮಾಡಬೇಕು. ಎಲ್ಲಾರೈಲ್ವೆ ನಿಲ್ದಾಣಗಳಲ್ಲಿ ಸಿಸಿಟಿವಿ ಗಳನ್ನು ಅಳವಡಿಸುವಂತೆ ಸೂಚನೆ ನೀಡಿದ ಕೇಂದ್ರ ಸಚಿವರು, ಈ ಬಗ್ಗೆ ದೆಹಲಿಯಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಕೂಡಾ ಚರ್ಚಿಸುವುದಾಗಿ ತಿಳಿಸಿದರು.
ರೈಲ್ವೆ ನಿಲ್ದಾಣಕ್ಕೆ ತೆರಳುವ ರಸ್ತೆಯ ದುರಸ್ತಿ ಕುರಿತಂತೆ ರೈಲ್ವೆ, ನಗರಸಭೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸ್ಥಳ ತನಿಖೆ ನಡೆಸಿ, ಶೀಘ್ರದಲ್ಲಿ ಪ್ರಯಾಣಿಕರಿಗೆ ಉತ್ತಮ ರಸ್ತೆ ಸೌಲಭ್ಯ ಒದಗಿಸುವಂತೆ ಹಾಗೂ ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈಗಾಗಲೇ ಗುರುತಿಸಲಾಗಿರುವ ಬ್ಲಾಕ್ ಸ್ಪಾಟ್‍ಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಮತ್ತು ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದ ಸಚಿವರು, ಕಟಪಾಡಿ, ಉಡುಪಿ ಮತ್ತು ಪಡುಬಿದ್ರಿ ಜಂಕ್ಷನ್‍ಗಳಲ್ಲಿ ಅಪಘಾತ ಮತ್ತು ವಾಹನ ದಟ್ಟಣೆಯನ್ನುನಿಯಂತ್ರಿಸಲು ಸಿಗ್ನಲ್ ಅಳವಡಿಸುವಂತೆ, ಕರಾವಳಿ- ಮಲ್ಪೆರಸ್ತೆ ಕಾಮಗಾರಿಯನ್ನು ಶೀಘ್ರದಲ್ಲಿ ಆರಂಭಿಸುವಂತೆ, ಪರ್ಕಳದಲ್ಲಿ ತ್ವರಿತಗತಿಯಲ್ಲಿಕಾಮಗಾರಿ ಕೈಗೊಳ್ಳುವಂತೆ ಮತ್ತುಯಾವುದೇ ಕಾನೂನು ತೊಡಕುಗಳಿದ್ದಲ್ಲಿ ಶೀಘ್ರದಲ್ಲಿ ಬಗೆಹರಿಸಿಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಧಾನ ಮಂತ್ರಿಆವಾಸ್ ಯೋಜನೆಯಡಿ ನಗರ ಪ್ರದೇಶದ ಜನತೆಗೆ ಮನೆ ನಿರ್ಮಾಣ ಕುರಿತಂತೆ ವ್ಯಾಪಕ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಪೂರ್ಣಗುರಿಸಾಧಿಸುವಂತೆ ಹಾಗೂ ಮನೆ ನಿರ್ಮಣಕ್ಕೆ ಸುಲಭ ರೀತಿಯಲ್ಲಿ ಸಾಲ ದೊರೆಯುವಂತೆ ಕ್ರಮ ಕೈಗೊಳ್ಳಿ ಎಂದರು.
ಜಿಲ್ಲೆಯ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಗೇರು ಬೆಳೆಗಾರರಿಗೆ ಉತ್ತಮ ತಳಿಯ ಕಸಿ ಗಿಡ ಮತ್ತು ಹೆಚ್ಚು ಇಳುವರಿ ನೀಡುವಗೇರು ಗಿಡಗಳನ್ನು ಸರಬರಾಜು ಮಡುವಂತೆ ಸೂಚಿಸಿದ ಸಚಿವರು, ಮೀನುಗಾರಿಕೆ ಇಲಾಖೆ ವತಿಯಿಂದ ಏಫ್.ಓ.ಪಿ ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡುವಂತೆ ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ,ಕೆ.ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಸುಕುಮಾರ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಸಿಸಿಓ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್ ಹಾಗೂ ವಿವಿದ ಇಲಖೆಯ ಅನುಷ್ಠಾನಾಧಿಕರಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ