ಉಜಿರೆ : ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಐಕ್ಯುಎಸಿ, ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್‍ಕ್ರಾಸ್, ರೋವರ್ಸ್-ರೇಂಜರ್ಸ್ ಘಟಕ ಹಾಗೂ ಸಮಾಜಕಾರ್ಯ ವೇದಿಕೆಗಳ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಯುವ ದಿನಾಚರಣೆ ಮತ್ತು ಬೀದಿ ನಾಟಕ ತರಬೇತಿ ಕಾರ್ಯಾಗಾರವು ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಮಾತನಾಡಿ, “ಯುವ ಶಕ್ತಿ ಸಾಮಥ್ರ್ಯದ ಬಗ್ಗೆ ಅಪಾರ ಅರಿವು ಹೊಂದಿದ್ದ ವಿವೇಕಾನಂದರು, ತಮ್ಮೆಲ್ಲಾ ಬೋಧನೆಗಳಲ್ಲಿ ಯುವಜನತೆ ಮತ್ತು ದೇಶವನ್ನು ಕೇಂದ್ರೀಕರಿಸುತ್ತಿದ್ದರು. ಮಾನವತೆಯನ್ನು ಸಾರಿದ ಆಧ್ಯಾತ್ಮಿಕ ರಾಷ್ಟ್ರೀಯತೆಯನ್ನು ಪ್ರಚುರಪಡಿಸಿದ ವೀರಸಂನ್ಯಾಸಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಬೀದಿನಾಟಕ ತರಬೇತಿ ಕಾರ್ಯಾಗಾರದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.” ಎಂದರು.
ಬೀದಿನಾಟಕ ತರಬೇತುದಾರರಾದ ಶ್ರೀ ಜಗನ್ ಪವಾರ್ ಮಾತನಾಡಿ “ಜೀವನದಲ್ಲಿ ಯಾವುದೇ ಕಷ್ಟಗಳು ಎದುರಾದರೂ ಅದನ್ನು ಧೈರ್ಯವಾಗಿ ಎದುರಿಸುವ ಸಾಮಥ್ರ್ಯವನ್ನು ಯುವ ಜನತೆ ಬೆಳೆಸಿಕೊಳ್ಳಬೇಕು. ಭಾರತದ ಅಖಂಡತೆಯನ್ನು ಜಗತ್ತಿಗೆ ಸಾರಿದ, ಯುವಜನರಿಗೆ ಸ್ಪೂರ್ತಿದಾಯಕ ಸಂದೇಶಗಳನ್ನು ನೀಡಿ, ಸಮಾಜ ಸುಧಾರಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರ ಜೀವನ ನಮ್ಮೆಲ್ಲರಿಗೆ ಆದರ್ಶಪ್ರಾಯವಾಗಿದೆ” ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯುಎಸಿ ಸಂಚಾಲಕರಾದ ಡಾ.ಮೇವಿ ಮಿರಾಂದ, ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಂಯೋಜಕರಾದ ಡಾ.ದುಗ್ಗಪ್ಪ ಕಜೆಕಾರ್, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಶ್ರೀಮತಿ ಸುಷ್ಮಾ ಟಿ., ಮತ್ತು ಡಾ. ಮಹೇಶ ಕುಮಾರ್ ಕೆ.ಇ., ರೋವರ್ ಸ್ಕೌಟ್ ಲೀಡರ್ ಡಾ. ಉದಯ ಶೆಟ್ಟಿ, ಉಪನ್ಯಾಸಕರಾದ ಡಾ.ಪ್ರಮೀಳ ವಾಜ್, ಶ್ರೀ ರಾಜೇಂದ್ರ ಮೊಗವೀರ, ಶ್ರೀಮತಿ ಉಷಾ, ಶ್ರೀಮತಿ ಶ್ರೀಕಲ ಕುಮಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಕು. ಅಮೃತ ಪ್ರಥಮ ಎಂ.ಎಸ್.ಡಬ್ಲ್ಯು ಸ್ವಾಗತಿಸಿ, ಶ್ರೀಕರ ದ್ವಿತೀಯ ಬಿ.ಬಿ.ಎ ಧನ್ಯವಾದ ಅರ್ಪಿಸಿರು. ಬಸವರಾಜ ದ್ವಿತೀಯ ಬಿ.ಕಾಂ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ