ತೆಂಕನಿಡಿಯೂರು ಕಾಲೇಜು: ಸಾಧಕರಿಗೆ ಸನ್ಮಾನ

Chandrashekhara Kulamarva
0

ಉಜಿರೆ : ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ದಿನಾಂಕ: 22/12/2022 ರಂದು ಹಲವು ವರ್ಷಗಳಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ವಿವಿಧ ವೇಷಗಳನ್ನು ಧರಿಸಿ ಒಂದು ಕೋಟಿ ರೂಪಾಯಿಗೂ ಅಧಿಕ ಧೇಣಿಗೆ ಸಂಗ್ರಹಿಸಿ ಅನಾರೋಗ್ಯ ಪೀಡಿತ ಮಕ್ಕಳಿಗೆ ಸಹಾಯ ಮಾಡಿ ನಿರಂತರ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿ ಕಟಪಾಡಿಯವರನ್ನು ಸನ್ಮಾನಿಯಲಾಯಿತು.  


ಇದೇ ಸಂದರ್ಭದಲ್ಲಿ ಮಣಿಪಾಲ ಗ್ರೂಫ್ ಇದರ ಚೇರ್‍ಮೆನ್ ಆದ ಶ್ರೀ ಸುಧಾಕರ ಪೈ ಸಮಾಜ ಸೇವೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ದಯಾನಂದ ಶೆಟ್ಟಿ ಕೊಜಕುಳಿ, ಕರ್ನಾಟಕ ರಾಜ್ಯ ಸರಕಾರಿ ಕಾಲೇಜು ಅಧ್ಯಾಪಕರ ಸಂಘದ ವಲಯಾಧ್ಯಕ್ಷರಾದ ಪ್ರೊ. ಸುರೇಶ್ ರೈ ಕೆ. ಇವರನ್ನು ಸನ್ಮಾನಿಸಲಾಯಿತು.  


ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಶ್ರೀ ರಾಧಾಕೃಷ್ಣ, ಪ್ರೊ. ಗೋಪಾಲಕೃಷ್ಣ ಎಂ. ಗಾಂವ್ಕರ್, ಸಾಂಸ್ಕೃತಿಕ ಸಂಚಾಲಕರಾದ ಡಾ. ರಾಘವ ನಾಯ್ಕ, ಪದವಿ ವಿಭಾಗದ ಸಾಂಸ್ಕೃತಿಕ ಸಂಚಾಲಕರಾದ ಶ್ರೀ ಕೃಷ್ಣ, ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಪ್ರತಿನಿಧಿಗಳಾದ ಸ್ಪಂದನಾ ಮಯ್ಯ, ಯಮುನಪ್ಪ, ಸೋಮನಾಥ, ರಕ್ಷಿತಾ, ದಿಶಾ ಜಿ.ಸಿ., ಅನ್ವಿತಾ ಜಿ.ವಿ., ಮಹೇಶ್, ಸುಹಾಸ್, ಅಕ್ಷಯ್, ಸೌಂದರ್ಯ, ಕೆ. ಪ್ರಣೀತ್, ಸುಷ್ಮಾ ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
To Top