ತೆಂಕನಿಡಿಯೂರು : ಪ್ರತಿಭಾ ದಿನಾಚರಣೆಯ ಸಂಭ್ರಮ

Upayuktha
0

ಉಜಿರೆ : ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯ ಅನಾವರಣ ಹಾಗೂ ಸಾಂಸ್ಕೃತಿಕ ಸಂಭ್ರಮ ದಿನಾಂಕ: 22/12/2022 ರಂದು ನಡೆಯಿತು.  


ಸಮಾಜ ಸೇವಕ ಶ್ರೀ ರವಿ ಕಟಪಾಡಿ ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ಘಾಟಿಸಿ “ಸೇವಾ ಮನೋಭಾವನೆಯು ಮನುಷ್ಯ ಜೀವನವನ್ನು ಸಾರ್ಥಕ ಮತ್ತು ಸಂತೋಷಗೊಳಿಸುತ್ತದೆ.  ಅಶಕ್ತರ, ಅನಾರೋಗ್ಯ ಪೀಡಿತರ ಸಹಾಯಕ್ಕೆ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಬೇಕು”. ಎಂದು ತಮ್ಮ ಬದುಕಿನ ನಿದರ್ಶನಗಳ ಮೂಲಕ ವಿದ್ಯಾರ್ಥಿಗಳಿಗೆ ಕರೆಯಿತ್ತರು. 


ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ “ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ.  ಸೂಕ್ತ ವೇದಿಕೆ ಸಿಕ್ಕಾಗ ಹಿಂಜರಿಯದೆ ಮುನ್ನುಗ್ಗಿದಾಗ ಮಾತ್ರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯ, ಕಾಲೇಜು ಹಂತದಲ್ಲಿ ಸಿಕ್ಕಿದ ಈ ವೇದಿಕೆಯನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು” ಎಂದು ಹೇಳಿದರು. 


ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ವಿಶ್ವನಾಥ ಕರಬ, ಶ್ರೀ ದಯಾನಂದ ಕುಮಾರ್ ಹಾಗೂ ಶ್ರೀಮತಿ ಸುಶ್ಮಿತಾ ಮುಖ್ಯ ಅತಿಥಿಗಳಾಗಿದ್ದರು. ಕಾಲೇಜಿನ ಸಾಂಸ್ಕೃತಿಕ ಸಂಚಾಲಕರಾದ ಡಾ. ರಾಘವ ನಾಯ್ಕ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಕು. ಅಶ್ವಿಜಾ  ವಂದಿಸಿದರು. 


ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಶ್ರೀ ರಾಧಾಕೃಷ್ಣ, ಪ್ರೊ. ಗೋಪಾಲಕೃಷ್ಣ ಎಂ. ಗಾಂವ್ಕರ್, ಪದವಿ ವಿಭಾಗದ ಸಾಂಸ್ಕೃತಿಕ ಸಂಚಾಲಕರಾದ ಶ್ರೀ ಕೃಷ್ಣ, ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಮೇವಿ ಮಿರಾಂದ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಮನೀಷ, ರಾಜೇಶ್, ಮಂಜುನಾಥ ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥರು ಡಾ. ದುಗ್ಗಪ್ಪ ಕಜೆಕಾರ್ ಹಾಗೂ ಕನ್ನಡ ಸಹ ಪ್ರಾಧ್ಯಾಪಕ ಡಾ. ವೆಂಕಟೇಶ ಹೆಚ್.ಕೆ. ಕಾರ್ಯಕ್ರಮ ನಿರೂಪಿಸಿದರು.   


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ          


Post a Comment

0 Comments
Post a Comment (0)
To Top