ಮಂಗಳೂರು: ಜ. 31ರಂದು ಉದ್ಯೋಗಮೇಳ

Upayuktha
0

ಮಂಗಳೂರು: ಬೆಂಗಳೂರಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಮಂಗಳೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ನಗರದ ಕೆನರಾ ಕಾಲೇಜಿನ ಸಂಯುಕ್ತಾಶ್ರಯದಲ್ಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ (ಎನ್.ಸಿ.ಎಸ್.ಪಿ) ಮಾದರಿ ವೃತ್ತಿ ಕೇಂದ್ರ (ಎಂ.ಸಿ.ಸಿ) ದಡಿಯಲ್ಲಿ ಇದೇ ಜ.31ರ ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ನಗರದ ಕೆನರಾ ಕಾಲೇಜಿನಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.


ಈ ಮೇಳದಲ್ಲಿ 30ಕ್ಕೂ ಹೆಚ್ಚಿನ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ತಾಂತ್ರಿಕ, ಪದವಿ, ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದು. ಅಭ್ಯರ್ಥಿಗಳು http://bit.ly/3MW85Be ಲಿಂಕ್ ಮೂಲಕ ತಮ್ಮ ಹೆಸರು ನೋಂದಣಿ ಮಾಡಬೇಕು ಹಾಗೂ ಕನಿಷ್ಠ 10 ಸ್ವವಿವರಗಳ ಪ್ರತಿಯೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಬೇಕು.


ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಂಗಳೂರು ದೂ.ಸಂಖ್ಯೆ: 0824-2457139 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top