ಮಂಗಳೂರು : “ಸ್ವಾಮಿ ವಿವೇಕಾನಂದರು ಭಾರತೀಯರಲ್ಲಿ ಕುಂದಿದ್ದ ಆತ್ಮಸ್ಥೈರ್ಯವನ್ನು ಬಡಿದೆಬ್ಬಿಸಿ ಮಾನಸಿಕವಾಗಿ ಜಾಗೃತಿಗೊಳಿಸಿದರು. ತಮ್ಮ ಸಣ್ಣ ಅವಧಿಯಲ್ಲೇ ಜನರಮನೋನ್ನತಿಗೆ ಶ್ರಮಿಸಿ ಭಾರತದ ಶ್ರೇಷ್ಟತೆಯನ್ನು ಎತ್ತಿ ಹಿಡಿದು ಭಾರತೀಯ ಸಂಸ್ಕೃತಿಯ ಹಿರಿಮೆ, ಗರಿಮೆಯನ್ನು ಪ್ರಪಂಚದಾದ್ಯಂತ ಪಸರಿಸಿದವರಲ್ಲಿ ಸ್ವಾಮಿ ವಿವೇಕಾನಂದರು ಮೊದಲಿಗರಾದರು, ಎಂದು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ.ಕೆ. ಅಭಿಪ್ರಾಯಪಟ್ಟರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಭವನದಲ್ಲಿ ಗುರುವಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಮಂಗಳೂರು, ಮಂಗಳೂರು ವಕೀಲರ ಸಂಘ ಹಾಗೂ ರಾಷ್ಟ್ರೀಯ ಸೇವಾಯೋಜನೆ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಇವರ ಸಹಯೋಗದಲ್ಲಿ ನಡೆದ "ರಾಷ್ಟ್ರೀಯ ಯೋಜನಾ ದಿನಾಚರಣೆ" ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿನ ಸಮಸ್ಯೆಗಳ ಕುರಿತು ಮಾತಾಡುವುದು ಬಿಟ್ಟು ಸಮಸ್ಯೆ ಪರಿಹರಿಸಲು ಪ್ರಯತ್ನಿಸಬೇಕು, ಎಂದರು.
ಮಂಗಳೂರು ವಕೀಲರ ಸಂಘದ ಕಾರ್ಯದರ್ಶಿ ಶ್ರೀಧರ್ ಎಂ. ಮಕಾಜೆ ಮುಖ್ಯ ಅತಿಥಿಯಾಗಿ ಭಾಗವಹಿಸಿ, "ನಾವು ತಾಳ್ಮೆಯಿಂದ ಕೆಲಸ ನಿರ್ವಹಿಸಿದರೆ ನಮ್ಮ ಗುರಿಯನ್ನು ವೇಗವಾಗಿ ತಲುಪಲು ಸಾಧ್ಯ, ಋಣಾತ್ಮಕ ಅಂಶಗಳನ್ನು ಬಿಟ್ಟು ಧನಾತ್ಮಕ ಅಂಶಗಳನ್ನು ಮೈಗೂಡಿಸಿಕೊಂಡರೆ ಜ್ಞಾನ ಬೆಳಗುತ್ತದೆ," ಎಂದರು. ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮದ ಪ್ರಸ್ತುತತೆ ಅರಿಯುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಿವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ಸುರೇಶ್ ಸ್ವಾಗತಿಸಿದರು. ಎನ್.ಎಸ್.ಎಸ್ ವಿದ್ಯಾರ್ಥಿ ಲಕ್ಷ್ಮೀಕಾಂತ್ ನಿರೂಪಿಸಿದರು. ಎನ್.ಎಸ್.ಎಸ್ ಯೋಜನಾಧಿಕಾರಿ ಡಾ.ಗಾಯತ್ರಿ. ಎನ್ ಧನ್ಯವಾದ ಸಮರ್ಪಿಸಿದರು. ಎನ್.ಎಸ್.ಎಸ್ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ