ಅಖಿಲ ಭಾರತ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ : ಮೇದಿನಿ.ಎಂ.ಮರಾಠೆ ಆಯ್ಕೆ

Upayuktha
0




ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮೇದಿನಿ.ಎಂ.ಮರಾಠೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ಗೆ ಆಯ್ಕೆಯಾಗಿದ್ದಾರೆ. ಜನವರಿ 27ರಿಂದ 30ರ ವರೆಗೆ ಚೆನ್ನೈನ ಬಿ.ಎಸ್.ಅಬ್ದುರ್ ರೆಹಮಾನ್ ಕ್ರೆಸೆಂಟ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಎಂಡ್ ಟೆಕ್ನಾಲಜಿ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.


ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top