ಕಾರ್ಕಳದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಚರಿತ್ರೆ ಹರಿಕಥೆ

Upayuktha
0

ಕಾರ್ಕಳ: ಅಲ್ಲಮಪ್ರಭು ಪೀಠ ಕಾಂತಾವರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಆಶ್ರಯದಲ್ಲಿ ಜನವರಿ 1ರಂದು ಕಾರ್ಕಳದ ಹೋಟೇಲ್ ಪ್ರಕಾಶ್‌ನ ಸಂಭ್ರಮ ಸಭಾಂಗಣದಲ್ಲಿ ಶ್ರೀ ಸಾಯಿಬಾಬಾ ಸಂಕೀರ್ತನೆ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಚರಿತ್ರೆ ಹರಿಕಥೆ ನೆರವೇರಿತು. ಹಿರಿಯ ಹರಿದಾಸ ಕಲಾಸಾರಥಿ ತೋನ್ಸೆ ಪುಷ್ಕಳ ಕುಮಾರ್ ಅವರು ಕೀರ್ತನೆ ಹಾಗೂ ಹರಿಕಥೆಯನ್ನು ಪ್ರಸ್ತುತಪಡಿಸಿದರು. ಹಿಮ್ಮೇಳದಲ್ಲಿ ಕೀಬೋರ್ಡ್ ವಾದಕರಾಗಿ ಸತೀಶ್ ಸುರತ್ಕಲ್ ಹಾಗೂ ತಬಲಾ ವಾದಕರಾಗಿ ಅಭಿಜಿತ್ ಶೆಣೈ ಸಹಕರಿಸಿದರು.


ಅಲ್ಲಮಪ್ರಭು ಪೀಠದ ಸ್ಥಾಪಕ ಪ್ರಧಾನ ನಿರ್ದೇಶಕರಾದ ಡಾ. ನಾ.ಮೊಗಸಾಲೆ ಸ್ವಾಗತಿಸಿ ಕಲಾವಿದರನ್ನು ಗೌರವಿಸಿದರು. ಅ.ಭಾ.ಸಾ.ಪ ಕಾರ್ಕಳ ತಾಲೂಕಿನ ಗೌರವಾಧ್ಯಕ್ಷರಾದ ಎಸ್. ನಿತ್ಯಾನಂದ ಪೈ, ಅಧ್ಯಕ್ಷರಾದ ಶ್ರೀಮತಿ ಮಿತ್ರಪ್ರಭಾ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು. ಸದಾನಂದ ನಾರಾವಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top