
ಮಂಗಳೂರು: ಇಲ್ಲಿನ ಲಾಲ್‍ಬಾಗ್‍ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜ.21ರ ಶನಿವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಫ್ಲಿಪ್‍ಕಾರ್ಟ್ ವತಿಯಿಂದ ನೇರ ಸಂದರ್ಶನ ಆಯೋಜಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಫೀಲ್ಡ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಪುರುಷರು ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಹಾಜರಾಗಬಹುದು. ಅಭ್ಯರ್ಥಿಗಳು ಮೊಬೈಲ್ ಫೋನ್ ಹಾಗೂ ದ್ವಿಚಕ್ರ ವಾಹನ ಮತ್ತು ಚಾಲನಾ ಪರವಾನಿಗೆ ಹೊಂದಿರುವುದು ಕಡ್ಡಾಯ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ