ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವ, ಪಾದಾಭಿಷೇಕ

Upayuktha
0

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೊಂದನೆ ವರ್ಧಂತ್ಯುತ್ಸವದ ಅಂಗವಾಗಿ ಫೆಬ್ರವರಿ 3 ರಂದು ಶುಕ್ರವಾರ ಬೆಳಿಗ್ಯೆ ಗಂಟೆ 8:30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.


ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.


ಇದಕ್ಕೆ ಪೂರ್ವಭಾವಿಯಾಗಿ ಫೆಬ್ರವರಿ 2 ರಂದು ಗುರುವಾರ ಬೆಳಿಗ್ಯೆ ಗಂಟೆ 9 ರಿಂದ ರತ್ನಗಿರಿಯಲ್ಲಿ ತೋರಣಮುಹೂರ್ತ, ವಿಮಾನಶುದ್ಧಿ, ಶೋಡಷ ಕಲಶಾಭಿಷೇಕ ಮತ್ತು ಸಂಜೆ 4 ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ- ವಿಧಾನಗಳು ನಡೆಯಲಿವೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top