ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ವಿವಿಧ ಸ್ಪರ್ಧಾ ಕಾರ್ಯಕ್ರಮ

Upayuktha
0

ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು: ಗಿರೀಶ್ ನಂದನ್


ಪುತ್ತೂರು: ಸ್ಪರ್ಧಾ ಮನೋಭಾವನೆ ಬೆಳೆಸಿಕೊಂಡು ಎಲ್ಲಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು. ಜತೆಗೆ ರಾಷ್ಟ್ರಭಕ್ತಿಯನ್ನು ಹೆಚ್ಚಿಸಿಕೊಂಡು ಬೆಳೆಯಬೇಕು ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು.


ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಜಂಟಿ ಆಶ್ರಯದೊಂದಿಗೆ 74ನೇ ಗಣರಾಜ್ಯೋತ್ಸವದ ಪ್ರಯುಕ್ತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ಅತಿಥಿಯಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಮಾತನಾಡಿ ಎಲ್ಲಾ ಸ್ಪರ್ಧೆಗಳು ಮಕ್ಕಳ ಬೆಳವಣಿಗೆಗೆ ಪೂರಕವಾಗಿರುತ್ತವೆ. ಮಕ್ಕಳು ಮುಂದಿನ ಜವಾಬ್ದಾರಿಯುತ ಪ್ರಜೆಗಳಾಗಬೇಕು. ಒಳ್ಳೆಯ ರಾಷ್ಟ್ರವನ್ನು ನಿರ್ಮಾಣ ಮಾಡಬೇಕು. ವಿವೇಕಾನಂದರಂತಹ ಮಹಾವ್ಯಕ್ತಿಗಳ ಜೀವನ ಚರಿತ್ರೆಯನ್ನು ಓದಿ ಸದೃಢ ದೇಶ ರೂಪಿಸಬೇಕು ಎಂದು ತಿಳಿಸಿದರು.


ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಮಕ್ಕಳಲ್ಲಿ ಪಠ್ಯದ ಜೊತೆ ಪಠ್ಯೇತರ ವಿದ್ಯಾ ಸಂಸ್ಥೆಗಳು ಶಿಕ್ಷಣದಲ್ಲಿ ಜಾಗೃತಿಯನ್ನು ಮೂಡಿಸಲು ವಿಫಲವಾದ ಕಾರಣ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.


ವೇದಿಕೆಯಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿ ರತ್ನ ಕುಮಾರಿ ಪಿ.ಕೆ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಅಂಬಿಕಾ ಸಿ.ಬಿ.ಎಸ್.ಇ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ. ಭಟ್ ಹಾಗೂ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.


ಶಿಕ್ಷಕಿಯರಾದ ಶ್ರುತಿ ಸ್ವಾಗತಿಸಿ, ರಮ್ಯಾ ವಂದಿಸಿದರು, ಶಿಕ್ಷಕಿ ಪ್ರಿಯಾಶ್ರೀ ಕೆ.ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top