ಸುಮಲತಾ ಅಂಬರೀಷ್ ಬಿಜೆಪಿ ಸೇರುವ ಸುಳಿವು ನೀಡಿದ ಸಚಿವ ಡಾ. ಕೆ.ಸಿ. ನಾರಾಯಣ ಗೌಡ

Upayuktha
0

ಶಿವಮೊಗ್ಗ: ಸುಮಲತಾ ಅಂಬರೀಷ್ ಶೀಘ್ರದಲ್ಲೆ ಬಿಜೆಪಿ ಸೇರುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ.ನಾರಾಯಣ ಗೌಡ ಹೇಳಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಅಂಬರೀಷ್ ಬಿಜೆಪಿಗೆ ಸೇರ್ಪಡೆಯಾಗುವ ಬಗ್ಗೆ ಮೊದಲ ಸುತ್ತಿನ ಮಾತುಕತೆಯಾಗಿದೆ. ಆದರೆ ಇನ್ನೂ ಅಂತಿಮವಾಗಿಲ್ಲ. ಶೀಘ್ರದಲ್ಲೆ ಸೇರಬಹುದು ಎಂಬ ನಿರೀಕ್ಷೆ ಇದೆ ಎಂದರು.


ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯವರ ಆಡಳಿತ ನಮಗೆ ವರದಾನವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನವರು ದಿಕ್ಕೆಟ್ಟಿದ್ದಾರೆ. ಬಿಜೆಪಿಯವರ್‍ಯಾರೂ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಈ ಚುನಾವಣೆ ಎದುರಿಸುತ್ತೇವೆ. ಅವರು ಈ ಇಳಿವಯಸ್ಸಿನಲ್ಲೂ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಬಿ.ವೈ. ವಿಜಯೇಂದ್ರ ಯುವಶಕ್ತಿಯಾಗಿದ್ದಾರೆ. ಅವರು ಶಿಕಾರಿಪುರದಲ್ಲೇ ನಿಲ್ಲಲಿ, ವರುಣದಲ್ಲೇ ನಿಲ್ಲಲಿ ಬಹುಮತದೊಂದಿಗೆ ಗೆಲ್ಲುತ್ತಾರೆ ಎಂದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top