ಅಡ್ಯನಡ್ಕ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮವು ಕಾಲೇಜಿನ ವಾರಣಾಶಿ ಕೃಷ್ಣ ಸಭಾಭವನದಲ್ಲಿ ನಡೆಯಿತು.
ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಲು ವಿದ್ಯಾರ್ಥಿಗಳು ಕೌಶಲಗಳನ್ನು ಬೆಳೆಸಿಕೊಳ್ಳಬೇಕು ಎಂದು ನುಡಿದರಲ್ಲದೆ, ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳಿಸುವುದರೊಂದಿಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಕೀರ್ತಿವಂತರಾಗಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ಮಾತನಾಡಿ, ದ್ವಿತೀಯ ಪಿಯುಸಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಮುಂದಿನ ಭವಿಷ್ಯದ ಮೆಟ್ಟಿಲು ಎಂದು ನುಡಿದರು.
ಜನತಾ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿಗಳಾದ ರಮೇಶ್ ಎಂ. ಬಾಯಾರು, ಜನತಾ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ಜತ್ತಪ್ಪ ರೈ ಕುಕ್ಕುವಳ್ಳಿ, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ. ಶ್ರೀನಿವಾಸ್ ಸಂದರ್ಭೋಚಿತವಾಗಿ ಮಾತನಾಡಿದರು. ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ವೀಣಾ ಟಿ. ಪ್ರಸ್ತಾವನೆಗೈದರು. ಉಪನ್ಯಾಸಕರ ಪರವಾಗಿ ಆಂಗ್ಲ ಉಪನ್ಯಾಸಕಿ ಜಯಶ್ರೀ ಕೆ. ಆರ್ ಹಾಗೂ ಹಿಂದಿ ಉಪನ್ಯಾಸಕರಾದ ಸೋಮಶೇಖರ್ ಎಚ್. ಅವರು ಮಾತನಾಡಿದರು.
ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಶುಭ ಹಾರೈಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಪ್ರಥಮ ವಿಜ್ಞಾನ ವಿಭಾಗದ ಕು. ಮೋಕ್ಷಾ ನಿರೂಪಿಸಿದರು. ಪ್ರಥಮ ವಾಣಿಜ್ಯ ವಿಭಾಗದ ರಾಕೇಶ್ ಸ್ವಾಗತಿಸಿ, ಪ್ರಥಮ ಕಲಾ ವಿಭಾಗದ ಕು. ಪದ್ಮಶ್ರೀ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


