ಉಡುಪಿ : ಉಡುಪಿ ತಾಲೂಕು ಶಿಶು ಅಭಿವೃದ್ಧಿಯೋಜನೆಯಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯಅಂಗನವಾಡಿ ಕೇಂದ್ರಗಳಾದ ಶಿವಾನಂದನಗರ (ಸಾಮಾನ್ಯ),ಹೆಜಮಾಡಿ ಬೋರುಗುಡ್ಡೆ(ಸಾಮಾನ್ಯ),ಕಾಜರಗುತ್ತು(ಸಾಮಾನ್ಯ), ಧರ್ಮೆಟ್ಟು(ಸಾಮಾನ್ಯ) ಮತ್ತುಮಣಿಪುರ ವಿ.ಪಿ (ಸಾಮಾನ್ಯ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿ.ಯು.ಸಿ ತೇರ್ಗಡೆ ಹೊಂದಿರುವ, ಎಸ್.ಎಸ್.ಎಲ್.ಸಿ.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅಭ್ಯಾಸ ಮಾಡಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಹಾಗೂಅದಮಾರು (ಸಾಮಾನ್ಯ), ಶಿವಾನಂದನಗರ (ಸಾಮಾನ್ಯ), ಬೊಳ್ಜೆ (ಸಾಮಾನ್ಯ), ಪಿತ್ರೋಡಿ (ಸಾಮಾನ್ಯ), ಬಬ್ಬರ್ಯಗುಡ್ಡೆ (ಸಾಮಾನ್ಯ), ಬೊಟ್ಟಲ (ಸಾಮಾನ್ಯ), ಎರ್ಮಾಳು ಬಡಾ(ಸಾಮಾನ್ಯ), ನವಶಕ್ತಿ (ಸಾಮಾನ್ಯ), ಮಹಾತ್ಮಾಗಾಂಧಿ ಶಾಲೆ (ಸಾಮಾನ್ಯ), ಎಲ್.ವಿ.ಪಿ-2 (ಸಾಮಾನ್ಯ), ಪೊಲಿಪು ಗರಡಿ (ಸಾಮಾನ್ಯ), ಕಡೆಕಾರು ಪಡುಕೆರೆ (ಸಾಮಾನ್ಯ) ಮತ್ತುಮಣಿಪುರ ವಿ.ಪಿ (ಸಾಮಾನ್ಯ)ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಅಂಗನವಾಡಿ ಸಹಾಯಕಿ ಹುದ್ದೆಗೆ 19 ರಿಂದ 35 ವರ್ಷದೊಳಗಿನಕರ್ನಾಟಕರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರುವ, ಪ್ರಥಮ/ದ್ವಿತೀಯ ಭಾಷೆಯಾಗಿಕನ್ನಡ, ಸಾಮಾನ್ಯಗಣಿತ ಮತ್ತು ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿರುವಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಹಾಗೂ ಲಿಂಗತ್ವಅಲ್ಪಸಂಖ್ಯಾತ ಮಹಿಳೆಯರಿಂದ ಅರ್ಜಿಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನಮಾಹಿತಿಗಾಗಿ ಶಿಶು ಅಭಿವೃದ್ಧಿಯೋಜನಾಧಿಕಾರಿ,ಉಡುಪಿ ದೂರವಾಣಿ ಸಂಖ್ಯೆ : 0820-2524055 ಅನ್ನುಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದುಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳುಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ