ಗೃಹರಕ್ಷಕರ ಚುನಾವಣಾ ಪೂರ್ವ ಸಿದ್ಧತಾ ಸಭೆ

Upayuktha
0

ಬಂಟ್ವಾಳ: ಮುಂದಿನ ಮೇ ತಿಂಗಳಲ್ಲಿ ನಡೆಯುವ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೃಹರಕ್ಷಕರನ್ನು ನೇಮಿಸಬೇಕಾಗಿರುವುದರಿಂದ ದ.ಕ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟ ಮತ್ತು ಪೌರರಕ್ಷಣಾ ಪಡೆಯ ಮುಖ್ಯಪಾಲಕರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಬಂಟ್ವಾಳ ಗೃಹರಕ್ಷಕದಳಕ್ಕೆ ದಿನಾಂಕ 10-02-2023 ರಂದು ಭೇಟಿ ನೀಡಿದರು. 


ನಿಷ್ಕ್ರಿಯ ಗೃಹರಕ್ಷಕರನ್ನು ತೆಗೆದುಹಾಕಿ ಹೆಚ್ಚು ಕ್ರೀಯಾಶೀಲ ಗೃಹರಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಘಟಕಾಧಿಕಾರಿ ಶ್ರೀ ಐತಪ್ಪ ಅವರಿಗೆ ಸೂಚನೆ ನೀಡಿದರು. ಎಲ್ಲಾ ಗೃಹರಕ್ಷಕರು ತಮ್ಮ ಸದಸ್ಯತ್ವ ನವೀಕರಣಗೊಳಿಸಿ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಮಾಡಿಸಿಕೊಂಡು ಚುನಾವಣೆಗೆ ತಯಾರಾಗುವಂತೆ ಸೂಚನೆ ನೀಡಿದರು. ಪದೇ ಪದೇ ಕಾರಣವಿಲ್ಲದೆ ವಾರದ ಕವಾಯತಿಗೆ ಗೈರುಹಾಜರಾಗುವ ಮತ್ತು ಬಂದೋಬಸ್ತ್ ಕರ್ತವ್ಯಗಳಿಗೆ ಬಾರದೇ ಇರುವ ಗೃಹರಕ್ಷಕರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಘಟಕಾಧಿಕಾರಿಗೆ ಸೂಚನೆ ನೀಡಿದರು. ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಗೆ ಎಲ್ಲಾ ಗೃಹರಕ್ಷಕರು ನೊಂದಾಯಿಸಿಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ಗೃಹರಕ್ಷಕರಾದ ಶಿವರಾಜ್, ರಾಜೇಶ್, ಜಯಂತ್ ಮುಂತಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top