ನಾಳೆ (ಫೆ.4) ಪ್ರಾಚಾರ್ಯರ ಡೈರಿ-23 ಬಿಡುಗಡೆ, ಹೊಸ ವಿನ್ಯಾಸದ ವೆಬ್‍ಸೈಟ್ ಅನಾವರಣ

Upayuktha
0

ವಳಚ್ಚಿಲ್ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯಕ್ರಮ


ಮಂಗಳೂರು: ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಹಾಗೂ ವಳಚ್ಚಿಲ್ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ಜಂಟಿ ಸಹಭಾಗಿತ್ವದಲ್ಲಿ ಪ್ರಾಚಾರ್ಯರ ಡೈರಿ-23 ಬಿಡುಗಡೆ ಮತ್ತು ಹೊಸ ವಿನ್ಯಾಸದ ವೆಬ್‍ಸೈಟ್ ಅನಾವರಣ ಕಾರ್ಯಕ್ರಮ ಫೆ.4ರಂದು ವಳಚ್ಚಿಲ್ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಅವರು ಉದ್ಘಾಟಿಸುವರು. ದ.ಕ. ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ. ಪ್ರಾಚಾರ್ಯರ ಡೈರಿ ಬಿಡುಗಡೆ ಮಾಡುವರು. ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್. ನಾಯಕ್ ಅವರು ಸಂಘದ ಹೊಸ ವಿನ್ಯಾಸದ ವೆಬ್‍ಸೈಟ್‍ನ ಅನಾವರಣ ನೆರವರಿಸುವರು. ದ.ಕ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಡಿ.ಜಯಣ್ಣ ಅವರು ಅಧ್ಯಕ್ಷತೆ ವಹಿಸುವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

 


Post a Comment

0 Comments
Post a Comment (0)
To Top