ಮೂಡುಬಿದಿರೆ: ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವುದಕ್ಕೆ ಸಂಬಂಧಿಸಿ ಅಧ್ಯಯನ ನಡೆಸಿ ವರದಿ ನೀಡುವುದಕ್ಕಾಗಿ ರಾಜ್ಯ ಸರಕಾರ ರಚಿಸಿದ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಡಾ. ಎಂ. ಮೋಹನ ಆಳ್ವ ಅವರನ್ನು ಅಖಿಲ ಭಾರತ ತುಳು ಒಕ್ಕೂಟ ಹಾಗೂ ತುಳು ಕೂಟ ಬೆದ್ರ ವತಿಯಿಂದ ಅಭಿನಂದಿಸಲಾಯಿತು.
ಒಕ್ಕೂಟದ ಪರವಾಗಿ ಚಂದ್ರಹಾಸ ದೇವಾಡಿಗ ಹಾಗೂ ತುಳುಕೂಟದ ಪರವಾಗಿ ಅಧ್ಯಕ್ಷರಾದ ಧನಕೀರ್ತಿ ಬಲಿಪ, ಕಾರ್ಯದರ್ಶಿಗಳಾದ ವೇಣುಗೋಪಾಲ ಶೆಟ್ಟಿ, ಜೊತೆ ಕಾರ್ಯದರ್ಶಿ ಸದಾನಂದ ನಾರಾವಿ, ಡಾ. ಯೋಗೀಶ್ ಕೈರೋಡಿ ಹಾಗೂ ಶಿವರಾಮ ಜೆ. ಶೆಟ್ಟಿ ಉಪಸ್ಥಿತರಿದ್ದರು.
ಸರಕಾರ ರಚಿಸಿದ ಈ ಸಮಿತಿಯು ಒಂಬತ್ತು ಸದಸ್ಯರನ್ನೊಳಗೊಂಡಿದ್ದು, ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕೆಂದು ಸಂಘ, ಸಂಸ್ಥೆಗಳು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ, ಕಾನೂನು ಚೌಕಟ್ಟಿನಲ್ಲಿ ಆಗುವ ಸಾಧಕ-ಬಾಧಕಗಳ ಬಗ್ಗೆ ಅಧ್ಯಯನ ನಡೆಸಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


