ಸಿದ್ಧತೆ ಪರಿಶೀಲಿಸಿದ ಶಾಸಕ ಪರಣ್ಣ ಮುನವಳ್ಳಿ
ಗಂಗಾವತಿ: ನಾಳೆ ಗಂಗಾವತಿ ನಗರದ ಜೂನಿಯರ್ ಕಾಲೇಜ್ ಮೈದಾನದಲ್ಲಿ ನಡೆಯುವ ಪೇಜ್ ಪ್ರಮುಖರ ಬಹಿರಂಗ ಸಮಾವೇಶ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಪರಣ್ಣ ಮನವಳ್ಳಿ ಅವರು ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷರು, ನಗರಸಭೆ ಸದಸ್ಯರು, ಪಧಾದಿಕಾರಿಗಳು ಕಾರ್ಯರ್ತರೊಂದಿಗೆ ಇಂದು ಸ್ಥಳಕ್ಕೆ ಭೇಟಿ ನೀಡಿ ವೇದಿಕೆಯ ಸಿದ್ದತಾ ಕಾರ್ಯಗಳನ್ನು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲಿಸಿದರು.
ಈ ಸಮಯದಲ್ಲಿ ಮೈದಾನದಲ್ಲಿ ಆಟೋಟದಲ್ಲಿ ತೊಡಗಿದ್ದ ಮಕ್ಕಳು ಶಾಸಕರನ್ನು ಕಂಡು ಮಾತನಾಡಿಸಿ ಪೊಟೊ ತೆಗೆಸಿಕೊಂಡದ್ದು ವಿಶೇಷವಾಗಿತ್ತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ