ವಿಐಎಸ್‌ಎಲ್ ಕಾರ್ಖಾನೆ ಪುನರಾರಂಭಕ್ಕೆ ಪ್ರಾಮಾಣಿಕ ಯತ್ನ: ಬಸವರಾಜ ಬೊಮ್ಮಾಯಿ

Upayuktha
0



ಶಿವಮೊಗ್ಗ: ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಇದರಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಂದು ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಹಿನ್ನೆಲೆಯಲ್ಲಿ ಬಂದಾಗ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಐಎಸ್‌ಎಲ್ ಕಾರ್ಖಾನೆಗೆ ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಯಾವುದೇ ಗೊಂದಲ ಬೇಡ. ಈ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಅಧಿಕಾರಿಗಳೊಂದಿಗೆ ಮಾತನಾಡಿದೆ. ಮತ್ತು ಇಂದು ಕೂಡ ಕಾರ್ಖಾನೆಯ ಕಾರ್ಮಿಕರು ಮತ್ತು ಅಧಿಕಾರಿಗಳ ನಿಯೋಗವು ತಮ್ಮನ್ನು ಭೇಟಿ ಮಾಡಲಿದೆ. ಅವರೊಂದಿಗೆ ಚರ್ಚಿಸುತ್ತೇನೆ. ಹಾಗೆಯೇ ಕಬ್ಬಿಣ ಮತ್ತು ಉಕ್ಕು ಉತ್ಪಾದಕ ಉದ್ಯಮಿಗಳ ಜೊತೆಯೂ ಸಭೆ ನಡೆಸುತ್ತೇನೆ. ಶಿವಮೊಗ್ಗದ ಜನಪ್ರತಿನಿಧಿಗಳ ಜೊತೆಯೂ ಮಾತನಾಡುತ್ತೇನೆ. ಉನ್ನತ ಮಟ್ಟದ ಸಭೆ ಕರೆದು ಅಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಕಾರ್ಖಾನೆಯನ್ನು ಪುನರಾರಂಭಿಸುವಂತೆ ಮನವಿ ಮಾಡುತ್ತೇನೆ. ನಮ್ಮ ಮನವಿಯನ್ನು ಕೇಂದ್ರದ ಸಚಿವರು ಒಪ್ಪುತ್ತಾರೆ. ಈ ವಾರದಲ್ಲಿಯೇ ಈ ಬಗ್ಗೆ ಸಂಪೂರ್ಣ ಕಾರ್ಯೋನ್ಮುಖನಾಗುತ್ತೇನೆ. ಕಾರ್ಮಿಕರು ಆತಂಕಪಡುವ ಅಗತ್ಯವಿಲ್ಲ ಎಂದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top