ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಐಇಐ ಸ್ಟೂಡೆಂಟ್ ಚಾಪ್ಟರ್ ನ ಉದ್ಘಾಟನಾ ಸಮಾರಂಭವು ಫೆ.೧೧ ರಂದು ನಿಟ್ಟೆ ತಾಂತ್ರಿಕ ಕಾಲೇಜಿನ ಕ್ಯಾಂಪಸ್ ನಲ್ಲಿ ನಡೆಯಿತು. ಜಸ್ಟೀಸ್ ಕೆ.ಎಸ್. ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ| ಸುಧೀರ್ ರಾಜ್ ಕೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ| ನಿರಂಜನ್ ಎನ್ ಚಿಪ್ಳೂಣ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಐಇಐ ಸ್ಟೂಡೆಂಟ್ ಚಾಪ್ಟರ್ ನ ಪ್ರಾಮುಖ್ಯತೆಯ ಬಗ್ಗೆ ವಿವರಿಸಿದರು. ೧೨೦ ಮಂದಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕಿ ಹಾಗೂ ಕಾರ್ಯಕ್ರಮದ ಸಂಯೋಜಕಿ ಡಾ| ಲತಾ ಶೆಣೈ ಸ್ವಾಗತಿಸಿದರು. ಸಿವಿಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಶ್ರೀರಾಮ್ ಮರಾಠೆ ವಂದಿಸಿದರು. ವಿದ್ಯಾರ್ಥಿನಿ ಕು.ಪ್ರಗ್ಯಾ ಕಾರ್ಯಕ್ರಮ ನಿರೂಪಿಸಿದರು.
ಉದ್ಘಾಟನಾ ಸಮಾರಂಭದ ಅನಂತರ ಡಾ| ಸುಧೀರ್ ರಾಜ್ ಅವರು 'ಹೌ ಟು ಬಿಕಮ್ ಟೈಮ್ಲೆಸ್ ಲೀಡರ್ಸ್' ಎಂಬ ವಿಷಯದ ಬಗೆಗೆ ವಿಸ್ತಾರವಾಗಿ ಮಾತನಾಡಿದರು. ಅನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ