ಕಸಾಪ ಅಧ್ಯಕ್ಷ ಡಾ. ಮಹೇಶ್‌ ಜೋಷಿ ಕಾಸರಗೋಡಿಗೆ ಭೇಟಿ

Upayuktha
0

ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇಂದ್ರಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಅವರು ಪ್ರಥಮ ಬಾರಿ ಕಾಸರಗೋಡಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಕಸಾಪ ಕೇರಳ ಗಡಿನಾಡ ಘಟಕದ ಕಛೇರಿಗೆ ಆಗಮಿಸಿದ ಅವರನ್ನು ಹಾರ್ದಿಕವಾಗಿ ಸ್ವಾಗತಿಸಲಾಯಿತು. ಘಟಕದ ಕಾರ್ಯಕ್ರಮಗಳ ವಿವರಗಳನ್ನು ಪರಿಶೀಲಿಸಿದ ಅವರು ಸಂತಸ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಹಿರಿಯ ಸದಸ್ಯರೂ ನಿಕಟ ಪೂರ್ವ ಅಧ್ಯಕ್ಷರಾದ ನ್ಯಾಯವಾದಿ ಐ.ವಿ ಭಟ್ ಮತ್ತು ನಿಕಟ ಪೂರ್ವ ಗೌರವ ಕೋಶಾಧ್ಯಕ್ಷ ಸುಕುಮಾರ್ ಆಲಂಪಾಡಿ ಅವರನ್ನು ಶಾಲು ಹೊದಿಸಿ ಗೌರವಿಸಿದರು. ಕಸಾಪ ಮಂಗಳೂರು ತಾಲೂಕು ಘಟಕದ ಗೌರವ ಕಾರ್ಯದರ್ಶಿ ಡಾ ಮುರಳೀ ಮೋಹನ್ ಚೂಂತಾರು, ಡಾ. ಜಯಪ್ರಕಾಶ ತೊಟ್ಟೆತ್ತೋಡಿ, ಡಾ ರಾಜಗೋಪಾಲ್ ಕಾಸರಗೋಡು, ಡಾ ಪ್ರಸನ್ನ ರೈ, ಗಣೇಶ್ ಪಾಣೂರು, ಪಿ ರಾಮಚಂದ್ರ ಭಟ್ ಧರ್ಮತ್ತಡ್ಕ, ಮುಂತಾದವರು ಉಪಸ್ಥಿತರಿದ್ದರು.


ತದನಂತರ ಡಾ ಜೋಷಿ ಅವರು ಅಸೌಖ್ಯದಿಂದಿರುವ ಕಸಾಪ ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಎಸ್.ವಿ ಭಟ್ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top