ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2021ನೇ ಇಸವಿಯ ಪ್ರತಿಷ್ಠಿತ ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರದರ್ಸ್ ದತ್ತಿ ಪ್ರಶಸ್ತಿ ಡಾ. ಮುರಲೀ ಮೋಹನ್ ಚೂಂತಾರು ಅವರ 12ನೇ ಕೃತಿ ಸಂಗಾತಿ ಜ್ವರ ಸಂಹಿತೆ ಕೃತಿಗೆ ದೊರಕಿದೆ. ಈ ಪ್ರಶಸ್ತಿ 10,000 ಸಾವಿರ ರೂಪಾಯಿ ನಗದು, ಫಲಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಮಾರ್ಚ್ 13 ಭಾನುವಾರದಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಮಂದಿರದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಷಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ.
ಡಾ. ಚೂಂತಾರು ಅವರು ಈವರೆಗೆ ಸುಮಾರು ಒಂದು ಸಾವಿರಕ್ಕೂ ಹೆಚ್ಚು ವೈದ್ಯಕೀಯ ಲೇಖನಗಳನ್ನು ಬರೆದು ವೈದ್ಯಕೀಯ ಸಾಹಿತಿ ಎಂದು ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಈವರೆಗೆ ಸುಮಾರು 13 ಕೃತಿಗಳನ್ನು ರಚಿಸಿರುತ್ತಾರೆ. ಅವರ ಮೂರನೇ ಕೃತಿ ‘ಸಂಜೀವಿನಿ’ಗೆ 2015 ರ ಕಸಾಪ ದತ್ತಿ ಪ್ರಶಸ್ತಿ, 6ನೇ ಕೃತಿ ಸಂಜೀವಿನಿ ಭಾಗ ಎರಡಕ್ಕೆ ಕರ್ನಾಟಕ ಸರಕಾರ 2017ನೇ ಸಾಲಿನ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಶ್ರೇಷ್ಠ ವೈದ್ಯಕೀಯ ಸಾಹಿತ್ಯ ಪ್ರಶಸ್ತಿ, ಏಳನೆಯ ಕೃತಿ ಅರಿವು ಬಾಯಿ ಕ್ಯಾನ್ಸರ್ ಮಾರ್ಗದರ್ಶಿಗೆ 2018ರ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿರುತ್ತದೆ.
ಇದಲ್ಲದೆ 2021ರ ಕಲಬುರ್ಗಿಯ ಶಂಕರ್ ಪ್ರತಿಷ್ಠಾನ ನೀಡುವ ಶ್ರೇಷ್ಠ ವೈದ್ಯಕೀಯ ಸಾಹಿತಿ ಪ್ರಶಸ್ತಿ ಮತ್ತು 2022ರ ರಾಜೀವಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ರಾಜ್ಯೋತ್ಸವ ಪ್ರಶಸ್ತಿಯನ್ನು ಡಾ. ಚೂಂತಾರು ಪಡೆದಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


