ಉಜಿರೆ: ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಮಂಗಳವಾರ ಪೂರ್ವಾಹ್ನ 8 ಗಂಟೆಗೆ ರಸ್ತೆ ಮೂಲಕ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ ಒಂದು ಗಂಟೆಗೆ ಮೂಡಿಗೆರೆ ಅತಿಥಿಗೃಹಕ್ಕೆ ಬರುವರು. ಅಲ್ಲಿಂದ ಅಪರಾಹ್ನ 3.30ಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ದೇವರ ದರ್ಶನದ ಬಳಿಕ ಸಂಜೆ 5 ಗಂಟೆಗೆ ಧರ್ಮಸ್ಥಳ ತಲುಪುವರು.
ರಾತ್ರಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ವಾಸ್ತವ್ಯ ಇರುವ ಅವರು ಬುಧವಾರ ಬೆಳಿಗ್ಗೆ ದೇವರ ದರ್ಶನದ ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ನವಜೀವನ ಸಮಾವೇಶದಲ್ಲಿ ಭಾಗವಹಿಸುವರು. ಅಪರಾಹ್ನ ಮೂರು ಗಂಟೆಗೆ ಧರ್ಮಸ್ಥಳದಿಂದ ಹೊರಟು ರಾತ್ರಿ ಕುದುರೆಮುಖದಲ್ಲಿ ಅರಣ್ಯ ಇಲಾಖೆಯ ಅತಿಥಿಗೃಹದಲ್ಲಿ ತಂಗುವರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ