79 ವರ್ಷದ ಉಮ್ಮನ್ ಚಾಂಡಿ ನ್ಯುಮೋನಿಯಾ ಮತ್ತು ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಉಮ್ಮನ್ ಚಾಂಡಿ ಅವರ ಮಗ ಫೇಸ್ ಬುಕ್ ಲೈವ್ ವಿಡಿಯೋ ಮಾಡಿದ್ದು, ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರೆ ಮಾಡಿ ನಮ್ಮ ತಂದೆಯ ಆರೋಗ್ಯ ವಿಚಾರಿಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿರುವ ಉಮ್ಮನ್ ಚಾಂಡಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಇನ್ನೂ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


