ಫೆ 26: ಅಖಿಲ ಭಾರತ ಕವಿಗಳು ಮತ್ತು ಲೇಖಕರ ಕ್ಷೇಮಾಭಿವೃದ್ಧಿ ಒಕ್ಕೂಟ ಅಸ್ತಿತ್ವಕ್ಕೆ: ಸದಸ್ಯತ್ವಕ್ಕೆ ಆಹ್ವಾನ

Upayuktha
0


ಮಂಗಳೂರು: ರಾಷ್ಟ್ರಮಟ್ಟದಲ್ಲಿ ಎಲ್ಲಾ 28 ರಾಜ್ಯಗಳ ಕವಿಗಳನ್ನು ಮತ್ತು ಲೇಖಕರನ್ನು ಒಂದೇ ವ್ಯವಸ್ಥಿತ ಜಾಲದಲ್ಲಿ ಸೇರಿಸಿಕೊಂಡು ಸಾಹಿತಿಗಳಿಗೆ ಕೇಂದ್ರ ಸರಕಾರದಿಂದ ಮತ್ತು ವಿವಿಧ ರಾಜ್ಯ ಸರಕಾರಗಳಿಂದ ಅನೇಕ ಅನುಕೂಲಗಳನ್ನು ದೊರಕಿಸುವ ಮತ್ತು ಲೇಖಕರ ಹಿತಾಸಕ್ತಿಗಳನ್ನು ಕಾಪಾಡುವುದಕ್ಕೆ ಮತ್ತು ಅವರ ಕುಟುಂಬಗಳನ್ನು ಆರೋಗ್ಯ ವಿಮೆಗಳ ಮೂಲಕ ರಕ್ಷಣೆ ಒದಗಿಸಲು ಮತ್ತಿತರ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ಸಂಯೋಜಿಸುವ ಉದ್ದೇಶದಿಂದ ಅಖಿಲ ಭಾರತ ಕವಿಗಳ ಮತ್ತು ಲೇಖಕರ ಕ್ಷೇಮಾಭಿವೃದ್ಧಿ ಒಕ್ಕೂಟ (All India Poets And Writers Union) ವನ್ನು ಆಸ್ತಿತ್ವಕ್ಕೆ ತರಲಾಗುತ್ತಿದ್ದು ಇದರ ಆರಂಭಿಕ ಮತ್ತು ಮೊದಲ ಹಂತದ ಸದಸ್ಯತ್ವ ಅಭಿಯಾನವನ್ನು ಫೆ 26 ರಂದು ಬೆಳಿಗ್ಗೆ 9 ರಿಂದ ಸಂಜೆ ಆರು ಗಂಟೆಯವರೆಗೆ ಮಂಗಳೂರು ಉರ್ವಸ್ಟೋರ್ ನ ಡಾ. ಬಿ ಆರ್ ಅಂಬೇಡ್ಕರ್ ಸಭಾಭವನ ಇಲ್ಲಿ ನಡೆಯುವ ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ನಾಡು ನುಡಿ ಸಮ್ಮೇಳನ 'ಕಾವ್ಯದಶಾವತಾರ'ದಲ್ಲಿ ವ್ಯವಸ್ಥೆ ಮಾಡಲಾಗಿದೆ.


ಮುಂದಿನ ದಿನಗಳಲ್ಲಿ ಪ್ರತಿ ರಾಜ್ಯಗಳಲ್ಲಿ ರಾಜ್ಯ ಸಮಿತಿ, ರಾಜ್ಯಗಳ ಜಿಲ್ಲೆಗಳಲ್ಲಿ ಜಿಲ್ಲಾ ಸಮಿತಿಗಳನ್ನು ರಚಿಸಲಾಗುವುದು. ಎಲ್ಲಾ ರಾಜ್ಯಗಳ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯದರ್ಶಿಗಳನ್ನು ಒಳಗೊಂಡ ಕೇಂದ್ರ ಸಮಿತಿಯ ಸಲಹಾ ಸಮಿತಿಯ ಸದಸ್ಯರನ್ನಾಗಿ ಮಾಡಲಾಗುವುದು.


ಅಖಿಲ ಭಾರತ ಕವಿಗಳ ಮತ್ತು ಲೇಖಕರ ಕ್ಷೇಮಾಭಿವೃದ್ಧಿ ಒಕ್ಕೂಟದ ಸದಸ್ಯರಾಗಲು ಬಯಸುವ ಕವಿಗಳು, ಲೇಖಕರು ಸದಸ್ಯತ್ವ ಅಭಿಯಾನದಲ್ಲಿ ಭಾಗವಹಿಸಿ ನಿಗದಿತ ಅರ್ಜಿ ತುಂಬಿ, ಫೋಟೋ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಬ್ಯಾಂಕ್ ಖಾತೆಗಳ ವಿವರಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು ಮತ್ತು ನೋಂದಣಿಗೆ ಯಾವುದೇ ಶುಲ್ಕ ಇರುವುದಿಲ್ಲ. ಹೆಚ್ಚಿನ ಮಾಹಿತಿಯನ್ನು 8618811546 ಸಂಖ್ಯೆಗೆ ವಾಟ್ಸಾಪ್ ಮಾಡಿ ಪಡೆದುಕೊಳ್ಳಬಹುದು ಎಂದು ಅಖಿಲ ಭಾರತ ಕವಿಗಳು ಮತ್ತು ಲೇಖಕರ ಕ್ಷೇಮಾಭಿವೃದ್ಧಿ ಒಕ್ಕೂಟದ ಸ್ಥಾಪಕಾಧ್ಯಕ್ಷ ಕಾ. ವೀ. ಕೃಷ್ಣದಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top