ಜೆಪ್ಪಿನಮೊಗರು 54ನೇ ವಾರ್ಡ್‌: ರಸ್ತೆ, ಕಿರು ಸೇತುವೆ ಕಾಮಗಾರಿಗೆ ಶಾಸಕ ಕಾಮತ್‌ ಶಿಲಾನ್ಯಾಸ

Upayuktha
0

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಜಪ್ಪಿನಮೊಗರು 54ನೇ ವಾರ್ಡಿನ ಅಡಂಕುದ್ರುವಿನಿಂದ ಉಳ್ಳಾಲ ಹೊಯ್ಗೆ ಕಡೆ ರಸ್ತೆ ಮತ್ತು ಕಿರು ಸೇತುವೆಯ ಕಾಮಗಾರಿಗೆ 2.50 ಕೋಟಿ ರೂ ವಿಶೇಷ ಅನುದಾನ ಒದಗಿಸಲಾಗಿದ್ದು ಕಾಮಗಾರಿಯ ಶಿಲಾನ್ಯಾಸ ಸಮಾರಂಭ ಬುಧವಾರ ನಡೆಯಿತು.


ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್‌ ಅವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್‌ ಅವರು, ಈ ರಸ್ತೆ ಅಭಿವೃದ್ಧಿಯಿಂದ ಈ ಭಾಗದ ಜನತೆಗೆ ಬಹಳಷ್ಟು ಅನುಕೂಲವಾಗಲಿದೆ. ಇದುವರೆಗೆ ಉಳ್ಳಾಲ ಮೂಲಕ ಸುತ್ತಿ ಬಳಸಿಕೊಂಡು ಬರಬೇಕಾಗಿತ್ತು. ಈ ರಸ್ತೆ ಅಭಿವೃದ್ಧಿ ಪೂರ್ಣಗೊಂಡ ನಂತರ ಈ ಭಾಗದ ಜನತೆಗೆ ನೇರ ಸಂಪರ್ಕ ಸಾಧ್ಯವಾಗಲಿದೆ ಎಂದು ತಿಳಿಸಿದರು. ಯೋಜನೆಯ ಅನುಷ್ಠಾನದಲ್ಲಿ ನಾನಾ ಹಂತದಲ್ಲಿ ಸಹಕರಿಸಿದ ಎಲ್ಲರಿಗೂ ಅವರು ಕೃತಜ್ಞತೆಗಳನ್ನು ಸಲ್ಲಿಸಿದರು.

ಪ್ರಾಥಮಿಕ ಹಂತದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಕಿರು ಸೇತುವೆ ನಿರ್ಮಾಣಕ್ಕೆ ಅನುದಾನ ಒದಗಿಸಿದ್ದು, ಮುಂದುವರಿದ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು. ಉಳ್ಳಾಲ ಹೈೂಗೆರಾಶಿ ಪರಿಸರದ ಜನರಿಗೆ ಈ ಹಿಂದೆ ನೀಡಿದ್ದ ಬೇಡಿಕೆಯಂತೆ ಯೋಜನೆ ಅನುಷ್ಠಾನಗೊಳ್ಳುತಿದ್ದು ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ಸ್ಥಳೀಯರು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.

ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಮಾಜಿ ಮೇಯರ್‌ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೊರೇಟರ್‌ ವೀಣಾ ಮಂಗಳ, ಪೆರ್ಮನ್ನೂರು ಸಂ ಸೆಬಾಸ್ಟಿಯನ್‌ ಧರ್ಮ ಕೇಂದ್ರದ ಪ್ರಧಾನ ಧರ್ಮಗುರುಗಳಾದ ಸಿಪ್ರಿಯನ್ ಪಿಂಟೊ ಮತ್ತು ಪೆರ್ಮನ್ನೂರ್‌ ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಅರುಣ್ ಡಿಸೋಜ, ಶಕ್ತಿ ಕೇಂದ್ರದ ಅಧ್ಯಕ್ಷರಾದ ಸಂದೇಶ್ ಶೆಟ್ಟಿ, ಬಿಜೆಪಿ ಮುಖಂಡರಾದ ರಾಮ್ ಪ್ರಸಾದ್ ಶೆಟ್ಟಿ, ದೀಪಕ್, ಲೋಹಿತ್ ಶೆಟ್ಟಿ, ಪುಷ್ಪರಾಜ್,  ಸುಜಾತಾ ಕೊಟ್ಟಾರಿ, ಉದಯ ಡಿಸೋಜಾ, ಸಿಪ್ರಿಯಾ ಸ್ಟೀವನ್ ಡಿಸೋಜ, ಸ್ಥಳೀಯರಾದ ಲಾರೆನ್ಸ್ ರೂಡಿ (M.G.T), ಸುರೇಶ್ ಡಿಸೋಜ (M.G.T) , ಡೆಮೆಟ್ರಿಯಸ್ ಜಿ ಡಿಸೋಜ,  ಸ್ಥಳೀಯ ನಾಗರಿಕರು ಮತ್ತಿತರ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


إرسال تعليق

0 تعليقات
إرسال تعليق (0)
To Top