ಮಂಗಳೂರಿನಲ್ಲಿ ವಿಶೇಷ ಚೇತನ ಮಕ್ಕಳಿಗಾಗಿ ವಿಶೇಷ ಪಾರ್ಕ್‌ ನಿರ್ಮಾಣ

Upayuktha
0

ಕದ್ರಿ ಪಾರ್ಕ್‌ ಪಕ್ಕದ 50 ಸೆಂಟ್ಸ್‌ ಜಾಗದಲ್ಲಿ ಬರಲಿದೆ: ಶಾಸಕ ಡಿ. ವೇದವ್ಯಾಸ ಕಾಮತ್‌



ಮಂಗಳೂರು: ಮಂಗಳೂರು ನಗರದ ಕದ್ರಿ ಪಾರ್ಕ್ ಸಮೀಪವೇ ವಿಶೇಷ ಚೇತನ ಮಕ್ಕಳಿಗಾಗಿ ಇನ್ನೊಂದು ಪಾರ್ಕ್‌ ಹಾಗೂ ಆಟದ ಮೈದಾನ ನಿರ್ಮಾಣವಾಗಲಿದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ತಿಳಿಸಿದರು.


ಮಂಗಳೂರಿನಲ್ಲಿ ಎರಡು ವಿಶೇಷ ಚೇತನ ಮಕ್ಕಳ ಶಾಲೆಗಳು ಕಾರ್ಯ ನಿರ್ವಹಿಸುತ್ತಿದ್ದು, ಚೇತನಾ ಶಾಲೆಯ ವಿನೋದ್ ಶೆಣೈ ಹಾಗೂ ಸಾನ್ನಿಧ್ಯ ವಿಶೇಷ ಮಕ್ಕಳ ಶಾಲೆಯ ವಸಂತ್ ಶೆಟ್ಟಿ ಅವರು ಈ ಮಕ್ಕಳ ಆಟ-ಪಾಠ ಮತ್ತು ಬೌದ್ಧಿಕ ವಿಕಾಸಕ್ಕಾಗಿ ಪ್ರತ್ಯೇಕ ಪಾರ್ಕ್ ಮತ್ತು ಆಟದ ಮೈದಾನ ನಿರ್ಮಿಸಿಕೊಡುವಂತೆ ಶಾಸಕ ಕಾಮತ್ ಅವರಿಗೆ ಮನವಿ ಸಲ್ಲಿಸಿದ್ದರು.

ಮನವಿಯನ್ನು ಪರಿಗಣಿಸಿದ ಶಾಸಕರು ಮಂಗಳೂರು ಅಭಿವೃದ್ಧಿ ಪ್ರಾಧಿಕಾರ (ಮೂಡಾ) ಅಧ್ಯಕ್ಷ ರವಿಶಂಕರ ಮಿಜಾರು ಅವರ ಜತೆ ಚರ್ಚಿಸಿ, ಮಂಗಳೂರು ಮಹಾನಗರ ಪಾಲಿಕೆಯಲ್ಲೂ ಪ್ರಸ್ತಾವ ಮಂಡಿಸಿ ಅನುಮೋದನೆ ದೊರಕುವಂತೆ ಮಾಡಿದ್ದಾರೆ.


ಈ ಹಿನ್ನೆಲೆಯಲ್ಲಿ ಕದ್ರಿ ಪಾರ್ಕ್‌ ಪಕ್ಕದ 50 ಸೆಂಟ್ಸ್‌ ಜಾಗದಲ್ಲಿ ವಿಶೇಷ ಚೇತನ ಮಕ್ಕಳ ಪಾರ್ಕ್‌ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಶೀಘ್ರವೇ ಇದು ಕಾರ್ಯಗತಗೊಳ್ಳಲಿದ್ದು, ಸ್ಮಾರ್ಟ್‌ ಸಿಟಿ ಮಂಗಳೂರಿನಲ್ಲಿ ಹೊಸದೊಂದು ಸೌಲಭ್ಯ ವಿಶೇಷ ಚೇತನ ಮಕ್ಕಳು ಮತ್ತು ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top