ಮಂಗಳೂರು: 5ನೇ ವಾರ್ಡ್‌ ಕೋಡ್ದಬ್ಬು ದೈವಸ್ಥಾನ ಪರಿಸರದ ಅಭಿವೃದ್ಧಿಗೆ 1.06 ಕೋಟಿ ವೆಚ್ಚದ ಕಾಮಗಾರಿ

Upayuktha
0

ಶಾಸಕ ವೇದವ್ಯಾಸ ಕಾಮತ್‌ ಅವರಿಂದ ಶಿಲಾನ್ಯಾಸ


ಮಂಗಳೂರು: ಮಹಾನಗರಪಾಲಿಕೆಯ 5ನೇ ಅತ್ತಾವರ ವಾರ್ಡ್‌ನ ಪ್ರಮುಖ 3ನೇ ಅಡ್ಡರಸ್ತೆಯಲ್ಲಿರುವ ಶ್ರೀ ಕೋಡ್ದಬ್ಬು ದೈವಸ್ಥಾನದ ಪರಿಸರದಲ್ಲಿ ಒಟ್ಟು 1 ಕೋಟಿ 06 ಲಕ್ಷ ರೂ ಮೊತ್ತದ ಮೂರು ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಇಂದು (ಫೆ.10, ಶುಕ್ರವಾರ) ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಮಗಾರಿಗಳ ವಿವರ ಮಾಹಿತಿ ನೀಡಿದರು. ಸ್ಥಳೀಯ ಕಾರ್ಪೊರೇಟರ್‌ ಸುನಿಲ್ ಶೆಟ್ಟಿ ಅವರ ಸಹಕಾರದೊಂದಿಗೆ ಈ ವಿಶೇಷ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.


ರಾಜ್ಯ ಸರಕಾರದ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ ಅಡಿ ಅನುದಾನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ನಗರದ ಅಭಿವೃದ್ಧಿಗಾಗಿ 125 ಕೋಟಿ ರೂ ಅನುದಾನ ಒದಗಿಸಿದ್ದಾರೆ. ಅದರಲ್ಲಿ 1 ಕೋಟಿ 6 ಲಕ್ಷ ರೂ.ಗಳನ್ನು ಕೋಡ್ದಬ್ಬು ದೈವಸ್ಥಾನ ಪರಿಸರದ ಅಭಿವೃದ್ಧಿಗೆ ನೀಡಲಾಗಿದೆ. ಈ ಮೊತ್ತದಲ್ಲಿ 44 ಲಕ್ಷ ರೂ ವೆಚ್ಚದಲ್ಲಿ ದೈವಸ್ಥಾನದ ಹಿಂದೆ ತಡೆಗೋಡೆ ನಿರ್ಮಾಣ, 38 ಲಕ್ಷ ರೂ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನ ಮತ್ತು ಚರಂಡಿ ಕಾಮಗಾರಿ,  25 ಲಕ್ಷ, ರೂ ವೆಚ್ಚದಲ್ಲಿ ಇಂಟರ್‌ಲಾಕ್ ಅಳವಡಿಕೆ- ನಡೆಸಲಾಗುತ್ತದೆ ಎಂದು ಶಾಸಕರು ವಿವರಿಸಿದರು.


ದಲಿತರು, ಪರಿಶಿಷ್ಟ ಜಾತಿ, ಪಂಗಡಗಳ ಜನರ ಅಭಿವೃದ್ಧಿಗಾಗಿ ಸರಕಾರ ಗರಿಷ್ಠ ಆದ್ಯತೆ ನೀಡಿದ್ದು, ಈ ಸಮಾಜದ ಅಭಿವೃದ್ಧಿಗೆ ಅನುದಾನದ ಬಳಕೆ ಮಾಡಲಾಗುತ್ತದೆ. ಆ ಮೂಲಕ ಪರಿಶಿಷ್ಟ ಜಾತಿ, ಪಂಗಡಕ್ಕೆ ನ್ಯಾಯ ಕೊಡುವ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ ಕಾಮತ್‌ ಹೇಳಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top