ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರಾವಳಿ ಶ್ರೀ ಸೇವಾಲಾಲ್ ಬಂಜಾರ(ಲಂಬಾಣಿ) ಸಂಘದ(ರಿ) ಸಹಕಾರದೊಂದಿಗೆ ಸಂತ ಶ್ರೀ ಸೇವಾಲಾಲ್ ಜಯಂತಿಯನ್ನು ಫೆ.15ರ ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಗೌರವ ಉಪಸ್ಥಿತಿ ವಹಿಸುವರು.
ಶಾಸಕರಾದ ಡಿ. ವೇದವ್ಯಾಸ ಕಾಮತ್, ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಸಂಜೀವ ಮಠಂದೂರು, ಉಮಾನಾಥ ಎ ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ.ಪ್ರತಾಪ್ ಸಿಂಹ ನಾಯಕ, ಮಂಜುನಾಥ ಭಂಡಾರಿ ಹಾಗೂ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರು, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಹಾಗೂ ಕರಾವಳಿ ಶ್ರೀ ಸೇವಾಲಾಲ್ ಒಂಜಾರ (ಲಂಬಾಣಿ) ಸಂಘದ(ರಿ) ಅಧ್ಯಕ್ಷ ರಾಜಪ್ಪ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪಶ್ಚಿಮ ವಲಯ ಜಾರಿ ವಿಭಾಗದ ಜಂಟಿ ಆಯುಕ್ತ ಡಾ. ಕುಮಾರ ನಾಯ್ಕ ಜಿ. ಉಪನ್ಯಾಸ ನೀಡಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ