ಮಂಗಳೂರು ವಿವಿ: ಮೌಲ್ಯಮಾಪನ ಕುಲಸಚಿವರಾಗಿ ಡಾ. ರಾಜುಕೃಷ್ಣ ಚಲ್ಲಣ್ಣವರ್ ಅಧಿಕಾರ ಸ್ವೀಕಾರ

Upayuktha
0

 


ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ (ಮೌಲ್ಯಮಾಪನ) ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ರಾಜುಕೃಷ್ಣ ಚಲ್ಲಣ್ಣವರ್  ಗುರುವಾರ ಅಧಿಕಾರವಹಿಸಿಕೊಂಡಿದ್ದಾರೆ. ಸರ್ಕಾರದ ಅಧಿಸೂಚನೆಯಂತೆ ಕುಲಸಚಿವ (ಮೌಲ್ಯಮಾಪನ) ರಾಗಿದ್ದ ಪ್ರೊ. ಪಿಎಲ್ ಧರ್ಮ ಅವರು ನೂತನ ಕುಲಸಚಿವರಿಗೆ ಅಧಿಕಾರ ಹಸ್ತಾಂತರಿಸಿದರು. 


ಪ್ರೊ. ಪಿಎಲ್ ಧರ್ಮ ಅವರು ಮಂಗಳೂರು ವಿವಿಯ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಮುಂದುವರಿಯಲಿದ್ದಾರೆ. ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಅಧ್ಯಕ್ಷರ ಹೊಣೆಗಾರಿಕೆಯನ್ನು ಸಹಾಯಕ ಪ್ರಾಧ್ಯಾಪಕ ಡಾ. ಎ ರಮೇಶ್ ನಿಭಾಯಿಸಲಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top