ಕೊಣಾಜೆ: ಮಂಗಳೂರು ವಿವಿಯ ಕನಕದಾಸ ಸಂಶೋಧನ ಕೇಂದ್ರ ಆಯೋಜಿಸುವ `ಕನಕ ಕೀರ್ತನ ಗಂಗೋತ್ರಿ’ ಶೈಕ್ಷಣಿಕ ಸಂಸ್ಥೆಗಳ ಹಾಗೂ ಸಾರ್ವಜನಿಕರ ಸಾಮುದಾಯಿಕ ಪಾಲ್ಗೊಳ್ಳುವಿಕೆಯ ಕನಕದಾಸರ ಕೀರ್ತನೆಗಳ ಗಾಯನ ಮತ್ತು ಸಮೂಹ ನೃತ್ಯ ಭಜನಾ ಕಾರ್ಯಕ್ರಮವು 14 ಫೆಬ್ರವರಿ 2023 ಮಂಗಳವಾರ ಪೂರ್ವಾಹ್ನ 10.00 ರಿಂದ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ನಡೆಯಲಿರುವುದು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹರಿದಾಸ ಸಂಗೀತ ರತ್ನ ಪುತ್ತೂರು ನರಸಿಂಹ ನಾಯಕ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಸನ್ಮಾನ್ಯ ಕುಲಪತಿಗಳಾದ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಇವರು ವಹಿಸಲಿರುವರು.
ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾದ ಡಾ. ಕಿಶೋರ್ ಕುಮಾರ್ ಸಿ.ಕೆ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕರಾದ ಡಾ. ಪರಮೇಶ್ವರ, ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಅಧ್ಯಕ್ಷರಾದ ಡಾ. ಸೋಮಣ್ಣ ಹೊಂಗಳ್ಳಿ, ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕರಾದ ಡಾ. ಧನಂಜಯ ಕುಂಬ್ಳೆ ಉಪಸ್ಥಿತರಿರುವರು. ಉದ್ಘಾಟನಾ ಸಮಾರಂಭದ ಬಳಿಕ ‘ಕನಕ ಕೀರ್ತನ ಗಂಗೋತ್ರಿ’ ಕನಕದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮ ಪ್ರೌಢಶಾಲೆ, ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಅಧ್ಯಾಪಕ-ಅಧ್ಯಾಪಕೇತರ ಮತ್ತು ಸಾರ್ವಜನಿಕ ಮಟ್ಟದಲ್ಲಿ ಕನಕದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮ ನಡೆಯಲಿದ್ದು ಆಸಕ್ತರು 8310300875 ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕಾರ್ಯಕ್ರಮ ಸಂಯೋಜಕ ಡಾ. ಧನಂಜಯ ಕುಂಬ್ಳೆ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ