ಫೆ.26: ಕಾಂತಾವರದಲ್ಲಿ ಮುದ್ದಣ ಸಾಹಿತ್ಯೋತ್ಸವ -2023

Upayuktha
0

ಕಾರ್ಕಳ: ಕಾಂತಾವರ ಕನ್ನಡ ಸಂಘವು ಪ್ರತಿ ವರ್ಷವೂ ಏರ್ಪಡಿಸುವ ಮುದ್ದಣ ಪ್ರಶಸ್ತಿ ಸಮಾರಂಭವನ್ನು ಮುದ್ದಣ ಸಾಹಿತ್ಯೋತ್ಸವ ಎಂಬ ಹೆಸರಿನಲ್ಲಿ ನಡೆಸುತ್ತಾ ಬರುತ್ತಿದ್ದು ಈ ಬಾರಿಯ ಮುದ್ದಣ ಸಾಹಿತ್ಯೋತ್ಸವವು ಇದೇ ಬರುವ ಫೆಬ್ರವರಿ 26ರಂದು ನಡೆಯಲಿದೆ.


ಸಮಾರಂಭದ ಅಧ್ಯಕ್ಷತೆಯನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ವಹಿಸಲಿದ್ದು, ಉದ್ಘಾಟನೆಯನ್ನು ವಿಶ್ರಾಂತ ಪ್ರಾಂಶುಪಾಲ ಪ್ರೊ| ಎಂ.ಎಲ್.ಸಾಮಗ ಅವರು ಮಾಡುತ್ತಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಅವರು ಭಾಗವಹಿಸಲಿದ್ದಾರೆ.


ನಲುವತ್ತ ಮೂರನೇ ವರ್ಷದ ಈ ಸಮಾರಂಭದಲ್ಲಿ ಈ ಬಾರಿಯ ಮುದ್ದಣ ಕಾವ್ಯ ಪ್ರಶಸ್ತಿ ಪುರಸ್ಕøತರಾದ ರಾಯಚೂರಿನ ಚಿದಾನಂದ ಸಾಲಿ ಮತ್ತು ಸಂಘದಲ್ಲಿ ಹೊಸತಾಗಿ ಸ್ಥಾಪನೆಯಾದ ಗಮಕ ಕಲಾ ಪ್ರವಚನ ಪ್ರಶಸ್ತಿ ಪುರಸ್ಕøತರಾದ ಡಾ. ರಾಘವೇಂದ್ರ ರಾವ್ ಪಡುಬಿದ್ರಿ, ಗಮಕ ವಾಚನ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಮಂಜುಳಾ ಸುಬ್ರಹ್ಮಣ್ಯ ಮಂಚಿ ಹಾಗೂ ಶಿಲ್ಪ ಗುರು ಪ್ರಶಸ್ತಿ ಪುರಸ್ಕೃತರಾದ ಕಾರ್ಕಳದ ಶಿಲ್ಪಿ ಶಾಮರಾಯ ಆಚಾರ್ಯ ಸ್ಮಾರಕ ಶಿಲ್ಪಕಲಾ ಪ್ರಶಸ್ತಿ ಪುರಸ್ಕೃತರಾದ ಬಿ.ಎಸ್. ಭಾಸ್ಕರ ಆಚಾರ್ಯ ಅವರನ್ನು ಮೂಡುಬಿದ್ರೆ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರೊ| ವೇಣುಗೋಪಾಲ ಶೆಟ್ಟರು ಅಭಿನಂದಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top